ಭೂಪಲ ತೆಗನೂರನಲ್ಲಿ 69ನೇ ಸಹಕಾರಿ ಸಪ್ತಾಹ

ಕಲಬುರಗಿ:ನ.17: ರಾಷ್ಟ್ರದ ಅನೇಕ ಜನಸಾಮಾನ್ಯರ ಆರ್ಥಿಕ ಜೀವನದ ಸುಗಮ ನಿರ್ವಹಣೆಗೆ ಸಾಕಷ್ಟು ಸಹಾಯಕರವಾಗಿ ಸಹಕಾರಿ ಸಂಸ್ಥೆಗಳು ಸೇವೆ ಸಲ್ಲಿಸುತ್ತಿವೆ. ಸಾಲಗಾರರು ಸೂಕ್ತ ಸಮಯಕ್ಕೆ ಸಾಲ ಮರುಪಾವತಿ ಮಾಡುವ ಮೂಲಕ ತಮ್ಮ ಜೊತೆಗೆ ಸಂಸ್ಥೆಯ ಬೆಳವಣಿಗೆ ಸಾಧ್ಯವಿದೆ ಎಂದು ಗುವಿವಿ ಸಿಂಡಿಕೇಟ್ ಮಾಜಿ ಸದಸ್ಯ ಡಾ.ಸುನೀಲಕುಮಾರ ವಂಟಿ ಹೇಳಿದರು.

ತಾಲೂಕಿನ ಭೂಪಾಲ ತೆಗನೂರ ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಬುಧವಾರ ಜರುಗಿದ 69ನೇ ಅಖಿಲ ಭಾರತ ಸಹಕಾರ ಸಪ್ತಾಹ’ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಹಕಾರಿ ಇಲಾಖೆಯ ಪ್ರಭಾರಿ ಉಪ ನಿರ್ದೇಶಕ ಶುಭಾಷ್‍ಚಂದ್ರ ಭರ್ಮಾ ಮಾತನಾಡಿ, ಸಹಕಾರಿ ಸಂಸ್ಥೆಗಳ ಬಗ್ಗೆ ಇನ್ನು ಹೆಚ್ಚಿನ ಮಟ್ಟದಲ್ಲಿ ಜನಜಾಗೃತಿ ಮೂಡಿಸುವ ಕಾರ್ಯ ಸಹಕಾರಿ ಸಂಸ್ಥೆಗಳ ಸದಸ್ಯರು ಮಾಡಬೇಕು. ಸಹಕಾರಿ ಸಂಸ್ಥೆಗಳ ಸದುಪಯೋಗವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು. ರಾಷ್ಟ್ರದ ಅಭಿವೃದ್ಧಿಯಲ್ಲಿ ಸಹಕಾರಿ ಸಂಸ್ಥೆಗಳ ಪಾತ್ರ ಅನನ್ಯವಾಗಿದೆ ಎಂದರು.

ಕಾರ್ಯಕ್ರಮವನ್ನು ಗ್ರಾ.ಪಂ. ಅಧ್ಯಕ್ಷೆ ಲಲಿತಾಬಾಯಿ ಶೆಳ್ಳಗಿ ಉದ್ಘಾಟಿಸಿದರು. ಸಹಕಾರಿ ಸಂಘದ ಅಧ್ಯಕ್ಷ ಮೈಲಾರಿ ವೈ.ಶೆಳ್ಳಗಿ ಅಧ್ಯಕ್ಷತೆ ವಹಿಸಿದ್ದರು. ಎನ್.ಸಿ.ಯು.ಐ. ನ ರಾಮಚಂದ್ರ ಕಾರಭೋಸಗಾ, ಪ್ರಮುಖರಾದ ಈರಣ್ಣ, ಜ್ಯೋತಿ, ಶೈಲಜಾ ಚವ್ಹಾಣ, ಮಝುಳಾ ಬಿರಾದಾರ, ಸುಜಾತಾ ಮಠ ಸೇರಿದಂತೆ ಮತ್ತಿತರರಿದ್ದರು.