ನವದೆಹಲಿ,ಜೂ.೧೦- ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅವರು ಮಹಿಳಾ ಕುಸ್ತಿಪಟುಗಳ ಜೊತೆ ಅನುಚಿತವಾಗಿ ವರ್ತನೆ ಮಾಡಿರುವುದು ಮತ್ತು ಮಹಿಳಾ ಕ್ರೀಡಾಪಟುಗಳನ್ನು ಸ್ಪರ್ಶಿಸುವುದನ್ನು ನಾನು ನೋಡಿದ್ದೇನೆ ಎಂದು ಅಂತಾರಾಷ್ಟ್ರೀಯ ರೆಫರಿ ಜಗ್ಬೀರ್ ಸಿಂಗ್ ಹೇಳಿದ್ದಾರೆ.
ಬ್ರಿಜ್ ಭೂಷಣ್ ಸಿಂಗ್ ಪ್ರಕರಣವನ್ನು ತಿಪ್ಪೆ ಸಾರಿಸಲು ಪೊಲೀಸರು ಪ್ರಯತ್ನಿಸುತ್ತಿರುವ ನಡುವೆ ಮಾಜಿ ರೆಫರಿಯ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಒಕ್ಕೂಟದ ಆಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಭಾರತೀಯ ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ವಿನೇಶ್ ಫೊಗಟ್ ಮತ್ತು ಸಾಕ್ಷಿ ಮಲಿಕ್ ಸೇರಿದಂತೆ ಅನೇಕ ಕ್ರೀಡಾಪಟುಗಳು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿರುವ ನಡುವೆ ರೆಫರಿ ಬಾಂಬ್ ಸಿಡಿಸಿದ್ಧಾರೆ.
ಅಪ್ರಾಪ್ತ ಕುಸ್ತಿಪಟುವಿನ ತಂದೆ ದಾಖಲು ಮಾಡಿದ್ದ ಪ್ರಕರಣ ಸಂಬಂಧ ಯು-ಟರ್ನ್ ಹೊಡೆದಿದ್ಧಾರೆ. ಡಬ್ಲ್ಯುಎಫ್‌ಐ ಮುಖ್ಯಸ್ಥನ ವಿರುದ್ಧ ಲೈಂಗಿಕ ಕಿರುಕುಳದ ಸುಳ್ಳು ಪೋಲಿಸ್ ದೂರು ಎಂದು ಹೇಳಿದ ಬಳಿಕ ಅಂತರಾಷ್ಟ್ರೀಯ ರೆಫರಿ ಜಗ್ಬೀರ್ ಸಿಂಗ್ ಅವರು ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ದ ಆರೋಪ ಮಾಡಿದ್ದಾರೆ.
ಬ್ರಿಜ್ ಭೂಷಣ್ ಸಿಂಗ್ ಅವರು ಮಹಿಳಾ ಕ್ರೀಡಾಪಟುಗಳ ಜೊತೆ ಅನುಚಿತವಾಗಿ ವರ್ತಿಸುವುದನ್ನು ನಾವು ಅನೇಕಬಾರಿ ನೋಡಿದ್ದೇನೆ ೨೦೧೩ ರಿಂದ ಹಲವಾರು ಸಂದರ್ಭಗಳಲ್ಲಿ ಮಹಿಳಾ ಕ್ರೀಡಾಪಟುಗಳಿಗೆ ಈ ರೀತಿಯ ಶೋಷಣೆ ಮಾಡುತ್ತಿದ್ದಾರೆ ಎಂದು ದೂರಿದ್ಧಾರೆ.
ಕಳೆದ ವರ್ಷ ಫೊ?ಟೋ ಸೆಷನ್‌ನಲ್ಲಿ ಬ್ರಿಜ್ ಭೂಷಣ್ ಸಿಂಗ್ ಮಹಿಳಾ ಕುಸ್ತಿಪಟುಗಳನ್ನು ಹೇಗೆ ಅನುಚಿತವಾಗಿ ಸ್ಪರ್ಶಿಸಿದ್ದರು ಎಂಬುದನ್ನು ನೆನಪಿಸಿಕೊಂಡರು.ಮಹಿಳಾ ಸ್ಪರ್ಧಿಗಳ ಲೈಂಗಿಕ ಕಿರುಕುಳದ ಆರೋಪದ ಮೇಲೆ ಭಾರತೀಯ ಕುಸ್ತಿಪಟುಗಳಿಂದ ಕಳೆದ ಆರು ತಿಂಗಳಿಂದ ಪಟ್ಟುಬಿಡದ ಪ್ರತಿಭಟನೆ ಎದುರಿಸುತ್ತಿದ್ದಾರೆ.