ಭೂ ಅಕ್ರಮ ಪ್ರಕರಣ: ಸಂಜಯ್ ರಾವತ್ ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ

.

ಮುಂಬೈ,ಸೆ.19- ಪತ್ರ ಛಾಲ್ ಭೂಹರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಶಿವಸೇನೆ ಹಿರಿಯ ಮುಖಂಡ ಸಂಜಯ್ ರಾವತ್ ಅವರಿಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಲಾಗಿದೆ.

ಈಗಾಗಲೇ ಮೂರು ನಾಲ್ಕು ಬಾರಿ ನ್ಯಾಯಾಂಗ ಅವಧಿಯನ್ನು ವಿಸ್ತರಣೆ ಮಾಡಿರುವ ಜಾರಿ ನಿರ್ದೇಶನಾಲಯದ ವಿಶೇಷ ನ್ಯಾಯಾಲಯ ಸಂಜಯ್ ರಾವತ್ ಅವರಿಗೆ ಮತ್ತೊಂದು ಅವಧಿಗೆ ಬಂಧನ ಅವಧಿ ವಿಸ್ತರಿಸಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದ ಜಾಮೀನು ಅರ್ಜಿಯ ವಿಚಾರಣೆಯನ್ನು ಜಾರಿ ನಿರ್ದೇಶನಾಲಯದ ವಿಶೇಷ ನ್ಯಾಯಾಲಯ ಈ ತಿಂಗಳ 21ಕ್ಕೆ ನಿಗಧಿ ಪಡಿಸಿದೆ.

ಈ ನಡುವೆ ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಖಲು ಮಾಡಿರುವ ಆರೋಪ ಪಟ್ಟಿಯ ನಕಲು ನೀಡುವಂತೆ ಶಿವಸೇನೆ ಮುಖಂಡ ಸಂಜಯ್ ರಾವತ್ ಮಾಡಿದ್ದ ಮನವಿಯನ್ನು ಜಾರಿ ನಿರ್ದೇಶನಾಲಯದ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ.

ನಾಡಿದ್ದು ನಡೆಯಲಿರುವ ಜಾಮೀನು ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸಂಜಯ್ ರಾವತದ ಅವರಿಗೆ ಜಾಮೀನು ನೀಡಬೇಕೇ ಅಥವಾ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಬೇಕೆ ಎನ್ನುವ ಕುರಿತು ನ್ಯಾಯಾಲಯ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ