ಭೋವಿ ಸಮುದಾಯದ ಒಗ್ಗಟ್ಟು ಪ್ರದರ್ಶಿಸಿ

ಕೋಲಾರ.ಮಾ೨ಚುನಾವಣೆ ಸಂದರ್ಭದಲ್ಲಿ ಭೋವಿ ಸಮುದಾಯದ ಮೇಲೆ ಬರುವ ಆರೋಪವನ್ನು ದೂರವಾಗಿಸುವ ನಿಟ್ಟಿನಲ್ಲಿ ಮತದಾರರು ಆಸೆ, ಆಮಿಷಗಳಿಗೆ ಒಳಗಾಗದೆ ಜೆಡಿಎಸ್ ಪಕ್ಷದ ಗೆಲುವಿಗಾಗಿ ಒಗ್ಗಟ್ಟು ಪ್ರದರ್ಶಿಸಿ ಹೊಸ ಸಂದೇಶ ನೀಡಬೇಕೆಂದು ಭೋವಿ ಸಮಾಜದ ಹಿರಿಯ ಮುಖಂಡೆ ಹಾಗೂ ಜಿಪಂ ಮಾಜಿ ಅಧ್ಯಕ್ಷೆ ಮಂಗಮ್ಮ ಮುನಿಸ್ವಾಮಿ ಕರೆ ನೀಡಿದರು.
ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಭೋವಿ ಸಮಾಜದ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು, ಎಚ್.ಡಿ.ಕುಮಾರಸ್ವಾಮಿ ಅವರು ಭೋವಿ ಸಮಾಜಕ್ಕೆ ಸದಾಕಾಲ ಅವಕಾಶಗಳನ್ನು ನೀಡುತ್ತಾ ಬಂದಿದ್ದಾರೆ. ಹಾಗಾಗಿ ಈ ಭಾರಿ ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳಿಗೆ ನಮ್ಮ ಸಮುದಾಯವು ಬೆನ್ನೆಲುಬಾಗಿ ನಿಂತು, ಗೆಲ್ಲಿಸಿಕೊಂಡರೆ ಸಮಾಜದ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದರು.
ಕೋಚಿಮುಲ್ ನಿರ್ದೇಶಕ ವಡಗೂರು ಡಿ.ವಿ.ಹರೀಶ್ ಮಾತನಾಡಿ, ಜಿಲ್ಲೆಯ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುವುದು ಶಥಸಿದ್ದ ಎಂದರು.
ಕೋಲಾರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ಮಾತನಾಡಿದರು.ಸಮಾವೇಶಕ್ಕೂ ಮುನ್ನ ಎಪಿಎಂಸಿ ಮಾರುಕಟ್ಟೆ ಸಮೀಪದ ನರಸಿಂಹಸ್ವಾಮಿ ದೇಗುಲದಿಂದ ಮೆರವಣಿಗೆ ನಡೆಸಲಾಯಿತು.
ಜಿಪಂ ಮಾಜಿ ಸದಸ್ಯ ಬಾಲಾಜಿ ಚನ್ನಯ್ಯ, ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್, ವಕ್ಕಲೇರಿ ರಾಮು, ನಗರಸಭೆ ಸದಸ್ಯರಾದ ಮಂಜುನಾಥ್, ರಾಕೇಶ್, ರಫೀಕ್, ಭೋವಿ ಸಂಘದ ಜಿಲ್ಲಾಧ್ಯಕ್ಷ ಅಪ್ಪಯ್ಯ, ಪ್ರಧಾನ ಕಾರ್ಯದರ್ಶಿ ಮುನಿಯಪ್ಪ, ನಿವೃತ್ತ ಫ್ರೊ.ಗೋವಿಂದಪ್ಪ, ಕುರುಬರ ಸಂಘದ ಅಶೋಕ್, ಬಲಿಜಿಗರ ಸಂಘದ ಅಶೋಕ್, ಮುಖಂಡರಾದ ಆರ್.ಎ.ಪಿ.ನಾರಾಯಣಸ್ವಾಮಿ ಇತರರು ಇದ್ದರು.