ಭೌತಿಕ ಬದುಕು ಸಮೃದ್ಧಗೊಂಡಂತೆ ಆಂತರಿಕ ಬದುಕು ಪರಿಶುದ್ಧಗೊಳ್ಳಬೇಕು

????????????

ಸಂಜೆವಾಣಿ ವಾರ್ತೆ

ಸೊರಬ.ಏ.೧; ಆಧುನಿಕ ಕಾಲದಲ್ಲಿ ಮಾನವೀಯ ಸಂಬAಧಗಳು ಶಿಥಿಲಗೊಳ್ಳುತ್ತಿವೆ. ಮನುಷ್ಯನಿಗೆ ಮಾನಸಿಕ ಶಾಂತಿ ಸಂತೃಪ್ತಿ ಇಲ್ಲದಂತಾಗಿದೆ. ಭೌತಿಕ ಬದುಕು ಸಮೃದ್ಧಗೊಂಡAತೆ ಆಂತರಿಕ ಬದುಕು ಪರಿಶುದ್ಧಗೊಳ್ಳಬೇಕೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಸೊರಬ ತಾಲೂಕಿನ ಶಾಂತಪುರ ಸಂಸ್ಥಾನ ಹಿರೇಮಠದಲ್ಲಿ ಜರುಗಿದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಹಾಗೂ ಜಾತ್ರಾ ಮಹೋತ್ಸವ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.ಬೆಲೆಯುಳ್ಳ ಬದುಕಿಗೆ ಸಂಸ್ಕಾರ ಮುಖ್ಯ. ಸಾಮಾಜಿಕ ಸಂಪ್ರದಾಯಗಳು ಬದಲಾಗಬಹುದು. ಆದರೆ ನೈತಿಕ ನಿಯಮಗಳು ಶಾಶ್ವತವಾಗಿರುತ್ತವೆ. ಮನುಷ್ಯನಲ್ಲಿ ಕರ್ತವ್ಯ, ಶಿಸ್ತು, ಶ್ರದ್ಧೆ, ಛಲ ಮತ್ತು ಸಮರ್ಪಣಾ ಮನೋಭಾವ ಬೆಳೆದುಕೊಂಡು ಬರುವ ಅವಶ್ಯಕತೆಯಿದೆ. ತನಗಾಗಿ ಬಯಸುವುದು ಜೀವ ಗುಣ. ಎಲ್ಲರಿಗಾಗಿ ಬಯಸುವುದು ದೇವ ಗುಣ. ಭೌತಿಕ ಬದುಕಿಗೆ ಆಧ್ಯಾತ್ಮ ಜ್ಞಾನದ ಅರಿವು ಮುಖ್ಯವೆಂಬುದನ್ನು ಶ್ರೀ ಜಗದ್ಗುರು ರೇಣುಕಾಚಾರ್ಯರು ನಿರೂಪಿಸಿದ್ದಾರೆ. ಅಂಗ ಅವಗುಣ ದೂರ ಮಾಡಿ ಲಿಂಗ ಗುಣ ಬೆಳೆಸಲು ವೀರಶೈವ ಧರ್ಮ ಸದಾ ಶ್ರಮಿಸಿದೆ. ಜ್ಞಾನ ಕ್ರಿಯಾತ್ಮಕವಾದ ಬದುಕಿನೊಂದಿಗೆ ಸಾಮಾಜಿಕ ಚಿಂತನೆಗೈದ ಕೀರ್ತಿ ಶ್ರೀ ಜಗದ್ಗುರು ರೇಣುಕಾಚಾರ್ಯರಿಗೆ ಸಲ್ಲುತ್ತದೆ. ಶಾಂತಪುರ ಸಂಸ್ಥಾನ ಹಿರೇಮಠದ ಶಿವಾನಂದ ಶಿವಾಚಾರ್ಯ ಸ್ವಾಮಿಗಳು ಭಕ್ತರ ಸಹಕಾರದಿಂದ ಪ್ರತಿ ವರುಷ ಜಯಂತ್ಯುತ್ಸವ ಆಚರಿಸುತ್ತಿರುವುದು ಸಂತೋಷ ತಂದಿದೆ ಎಂದರು.ಮಾಜಿ ಜಿ.ಪಂ.ಸದಸ್ಯ ಗಿರೀಶ ಸಮಾರಂಭವನ್ನು ಉದ್ಘಾಟಿಸಿದರು. ಪವಿತ್ರ ಸಮಾರಂಭದಲ್ಲಿ ಮಳಲಿ ಮಠದ ಡಾ.ನಾಗಭೂಷಣ ಶ್ರೀಗಳು, ಜಡೆ ಡಾ.ಮಹಾಂತ ಶ್ರೀಗಳು, ಸಂಗೊಳ್ಳಿ ಗುರುಲಿಂಗ ಶ್ರೀಗಳು, ಕುರುವತ್ತಿ ನಂದೀಶ್ವರ ಶ್ರೀಗಳು, ಲಕ್ಕವಳ್ಳಿ ಜೈನ ಮಠದ ಶ್ರೀಗಳು, ತಿರುಮಲಕೊಪ್ಪದ ದಾನ್ಯ ದೇವರು ಪಾಲ್ಗೊಂಡು ನುಡಿ ನಮನ ಸಲ್ಲಿಸಿದರು.