ಭ್ರಷ್ಟಾಚಾರ ಆರೋಪ‌ ಇಡಿ ಅಧಿಕಾರಿ ಸೆರೆ

ಬೆಂಗಳೂರು,ಮಾ.24-ಭ್ರಷ್ಟಾಚಾರದ ಆರೋಪದ ಮೇಲೆ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಯನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.
ಶಾಂತಿನಗರದ ಇಡಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ,ಲಲಿತ್ ಬಜಾಡ್ ಬಂಧಿತ ಆರೋಪಿಯಾಗಿದ್ದಾನೆ.
ಲಲಿತ್ ಬಜಾಡ್ ಮೇಲೆ ಅಕ್ರಮ ಆಸ್ತಿಗಳಿಕೆ ಆರೋಪ ಕೇಳಿ ಬಂದಿತ್ತು. ಸಿಬಿಐ ತನಿಖೆ ವೇಳೆ ಅಕ್ರಮ ಬಯಲಾದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಯನ್ನು ಸಿಬಿಐ ಅಧಿಕಾರಿಗಳು ಬಂಧಿಸಿ ತೀವ್ರ ವಿಚಾರಣೆ ಕೈಗೊಂಡಿದ್ದಾರೆ.