ಭ್ರಷ್ಟಾಚಾರ ನಿರ್ಮೂಲನೆಗೆ ವಿದ್ಯಾರ್ಥಿಗಳು ಸಂಘಟಿತರಾಗಿ


ಲಕ್ಷ್ಮೇಶ್ವರ,ನ.5: ಪಟ್ಟಣದ ಸರ್ಕಾರಿ ಪದವಿ ಪೂರ್ವ ವಿಜ್ಞಾನ ಕಾಲೇಜಿನಲ್ಲಿ ಕರ್ನಾಟಕ ಲೋಕಾಯುಕ್ತ ಹಾಗೂ ಗದಗ್ ಲೋಕಾಯುಕ್ತ ಇಲಾಖೆಯ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ಭ್ರಷ್ಟಾಚಾರ ವಿರೋಧಿ ಅರಿವು ಸಪ್ತಾಹದ ಅಂಗವಾಗಿ ಜಾಗೃತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಗದಗ ಜಿಲ್ಲಾ ಲೋಕಾಯುಕ್ತ ಎಸ್ಪಿ ಸತೀಶ್ ಚಿಟುಗುಬ್ಬಿ ಅವರು ವಿದ್ಯಾರ್ಥಿಗಳು ಈ ಹಂತದಲ್ಲಿಯೇ ಭ್ರಷ್ಟಾಚಾರ ನಿರ್ಮೂಲನೆಗಾಗಿ ಶ್ರಮಿಸಬೇಕು ಎಲ್ಲಿಯೇ ಭ್ರಷ್ಟಾಚಾರ ನಡೆದರು ವಿದ್ಯಾರ್ಥಿಗಳು ಸಂಘಟಿತವಾಗಿ ಅದರ ವಿರುದ್ಧ ಹೋರಾಡಬೇಕು ಎಂದರು.
ಲೋಕಾಯುಕ್ತ ಡಿವೈಎಸ್ಪಿ ಶಂಕರ್ ರಾಗಿ ಅವರು ಮಾತನಾಡಿ ಭ್ರಷ್ಟಾಚಾರದ ಪಿಡುಗನ್ನು ತೊಡಗಿಸಲು ವಿದ್ಯಾರ್ಥಿಗಳು ಪಣತೊಡಬೇಕು. ಎಲ್ಲಿಯೇ ಭ್ರಷ್ಟಾಚಾರ ನಡೆದರೂ ಧೈರ್ಯದಿಂದ ಅದರ ವಿರುದ್ಧ ಹೋರಾಡುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದರು. ಸಿಪಿಐ ರವಿ ಪುರುಷೋತ್ತಮ್ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ತಾಲೂಕ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ನಿರ್ಮೂಲ ಸಮಿತಿಯ ಅಧ್ಯಕ್ಷರಾದ ಸೋಮಣ್ಣ ಬೆಟಿಗೇರಿ ಸದಸ್ಯರಾದ ಮಲ್ಲನಗೌಡ ಪಾಟೀಲ್ ವೀರೇಂದ್ರ ಕಾಳಮ್ಮನವರ್ ನಿರಂಜನ್ ವಾಲಿ ಸೇರಿದಂತೆ ಅನೇಕರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ಮಂಜುನಾಥ ಕೊಕ್ಕರಗುಂದಿ ವಹಿಸಿದ್ದರು ವಿದ್ಯಾರ್ಥಿಗಳಿಗೆ ಭ್ರಷ್ಟಾಚಾರ ನಿರ್ಮೂಲನೆಯ ಪ್ರತಿಜ್ಞೆಯನ್ನು ಮಾಡಲಾಯಿತು.