ಭ್ರಷ್ಟಾಚಾರ ಮಾಡಿದ ಅಧಿಕಾರಿಗಳನ್ನು ಜೈಲಿಗೆ ಕಳಿಸುವುದು ಗ್ಯಾರಂಟಿ: ಸಚಿವ ಡಾ. ಶರಣಪ್ರಕಾಶ್ ಪಾಟೀಲ್

ಸೇಡಂ,ಜೂ, 08: ಜನರಿಗೆ ಮೋಸ ಮಾಡಿ ಅಭಿವೃದ್ಧಿ ಕೆಲಸಗಳನ್ನು ಮಾಡದೆ ಗುತ್ತಿಗೆದಾರರ ಪರವಾಗಿ ಕೆಲಸ ಮಾಡಿರುವ ಇಲಾಖೆಗಳ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿದವರಿಗೆ ಜೈಲಿಗೆ ಕಳಿಸುವುದು ಗ್ಯಾರಂಟಿ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್ ಖಡಕ್ ವಾನಿರ್ಂಗ್ ನೀಡಿದರು. ಪಟ್ಟಣದ ತಾಲೂಕ ಪಂಚಾಯಿತಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಥಮ ಕೆಡಿಪಿ ಸಭೆಯ ಅಧ್ಯಕ್ಷ ವಹಿಸಿ ಅವರು ಮಾತನಾಡಿದರು. ಕೃಷಿ ಇಲಾಖೆ ಬೀಜ ಶೇಖರಣೆ, ಮಾರುಕಟ್ಟೆಯಲ್ಲಿ ಸರ್ಕಾರಿ ಬೆಲೆಗಿಂತ ಹೆಚ್ಚು ಬೆಲೆಗೆ ಗೊಬ್ಬರು ಮಾರಾಟ, ಹಾಗೂ ನಟರೋಗದಿಂದ ಹಾನಿಯಾದ ರೈತರ ಕುರಿತು ಕಾಳಜಿ ವಹಿಸದೆ ಇರುವ ಕೃಷಿ ಸಹಾಯಕ ನಿರ್ದೇಶಕರಿಗೆ ಕ್ಲಾಸ್ ತೆಗೆದುಕೊಂಡರು. ಈ ವೇಳೆಯಲ್ಲಿ ಸಹಾಯಕ ಉಪ ವಿಭಾಗ ಆಯುಕ್ತರಾದ ಕಾರ್ತಿಕ್ ಎಮ್, ಮತ್ತು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶಂಕರ್ ರಾಥೋಡ್ ಸೇರದಂತೆ ಕೆಲವು ಇಲಾಖೆ ಅಧಿಕಾರಿಗಳ ಗೈರಾಗಿದ್ದು ಇನ್ನಿತರ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.