
ಸೊರಬ. ಫೆ.24; ರಾಜ್ಯದಲ್ಲಿ ಸ್ವಚ್ಛ ಪ್ರಾಮಾಣಿಕ ಆಡಳಿತ ಸ್ಥಾಪಿಸುವ ಮೂಲಕ ಭ್ರಷ್ಟಾಚಾರಕ್ಕೆ ಅಂತ್ಯ ಹಾಡುವುದೇ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಸೊರಬ ಕ್ಷೇತ್ರದ ಪೂರ್ವ ನಿಯೋಜಿತ ಅಭ್ಯರ್ಥಿ ಮಂಜುನಾಥ್ ಉಪ್ಪಳ್ಳಿ ಹೇಳಿದರು. ಪಟ್ಟಣದಲ್ಲಿ ಗುರುವಾರ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವೂ ಸ್ಪಜನ ಪಕ್ಷಪಾತ, ಭ್ರಷ್ಟಾಚಾರದ ವಿರುದ್ಧ ಹೋರಾಡುವ ಮೂಲಕ ಸ್ವಚ್ಛ ಆಡಳಿತವನ್ನು ನೀಡುವ ಏಕೈಕ ಉದ್ದೇಶದಿಂದ 224 ವಿಧಾನಸಭಾ ಕ್ಷೇತ್ರಗಳಲ್ಲೂ ಸ್ಪರ್ಧಿಸಲಿದೆ ಎಂದ ಅವರು ತಾಲೂಕಿನಲ್ಲಿ ಪಕ್ಷವನ್ನು ಸದೃಢವಾಗಿ ಸಂಘಟಿಸುವ ಉದ್ದೇಶದಿಂದ ಬೂತ್ ಮಟ್ಟದಲ್ಲಿ ಪದಾಧಿಕಾರಿಗಳನ್ನು ಹಾಗೂ ತಾಲೂಕು ಮಟ್ಟದ ಪದಾಧಿಕಾರಿಗಳನ್ನು ಸದ್ಯದಲ್ಲೇ ಆಯ್ಕೆ ಮಾಡುವ ಮೂಲಕ ಸಂಘಟನೆಗೆ ಒತ್ತು ನೀಡಲಾಗುವುದು ಎಂದರು. ಈ ಸಂದರ್ಭದಲ್ಲಿ ಉಮೇಶ್ ಎಮ್. ಪಿ, ಪ್ರಜ್ವಲ್, ಕುಶಾಲ್, ಪುನೀತ್, ಟೇಕ ರಾಜ್ ಸೇರಿದಂತೆ ಮೊದಲಾದವರಿದ್ದರು.