ಮಂಗಳವಾರ ರಜಾ ದಿನ ಕ್ಷೌರಿಕರಿಗಾಗಿ ಹಾಡು ಶೀಘ್ರ

ಕ್ಷೌರಿಕನ ಸುತ್ತ ಹೆಣೆಯಲಾಗಿರುವ ಕಥಾಹಂದರ ಹೊಂದಿರುವ “ಮಂಗಳವಾರ ರಜಾದಿನ” ಚಿತ್ರದ ಶೀರ್ಷಿಕೆ ಹಾಡು ಬಿಡುಗಡೆಗೆ ಸಜ್ಜಾಗಿದೆ.
ಇದೇ 24 ರಂದು ಲಹರಿ ಸಂಸ್ಥೆಯ ಮೂಲಕ ಹಾಡು ಬಿಡುಗಡೆಯಾಗಲಿದೆ.
ನಿರ್ದೇಶಕ ಯೋಗರಾಜ್ ಭಟ್ ಬರೆದಿರುವ ಈ ಚಿತ್ರದ ಶೀರ್ಷಿಕೆ ಹಾಡನ್ನು ವಿಜಯಪ್ರಕಾಶ್ ಹಾಡಿದ್ದಾರೆ. ಪ್ರಜೋತ್ ಡೇಸಾ ಸಂಗೀತ ನೀಡಿದ್ದಾರೆ.
ಚಿತ್ರದ ಶೀರ್ಷಿಕೆ ಗೀತೆ ಕೂಡ ಸವಿತಾ ಸಮಾಜದವರ ಕೀರ್ತಿ ಸಾರುವ ಹಾಗಿದೆ ಎನ್ನುತ್ತಾರೆ ನಿರ್ದೇಶಕ ಯುವಿನ್.
ಬೆಂಗಳೂರಿನಲ್ಲೇ ಬಹುತೇಕ ಭಾಗದ ಚಿತ್ರೀಕರಣ ನಡೆದಿದೆ. ಯವಿನ್ ನಿರ್ದೇಶನದ ಚಿತ್ರಕ್ಜೆ ಚಂದನ್ ಆಚಾರ್ ನಟಿಸಿದ್ದಾರೆ.
ಚಂದನ್ ಆಚಾರ್ ಚಿತ್ರದಲ್ಲಿ ಕ್ಷೌರಿಕನ ಪಾತ್ರ ನಿರ್ವಹಣೆ ಮಾಡಿದ್ದಾರೆ. ಲಾಸ್ಯ ನಾಗರಾಜ್ ಈ ಚಿತ್ರದ ನಾಯಕಿ. ‌
ಉಳಿದಂತೆ ಜಹಂಗೀರ್, ರಜನಿಕಾಂತ್, ಗೋಪಾಲ್ ದೇಶಪಾಂಡೆ, ನಂದನ್ ರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ನಾಲ್ಕು ಹಾಡುಗಳಿದ್ದು ಪ್ರಜೋತ್ ಡೇಸಾ ಸಂಗೀತ ,ಋತ್ವಿಕ್‌ ಮುರಳೀಧರ್ ಹಿನ್ನೆಲೆ ಸಂಗೀತವಿದೆ. ಉದಯ್ ಲೀಲಾ ಛಾಯಾಗ್ರಹಣವಿದೆ.
ಈಗಾಗಲೇ ಬಿಡುಗಡೆಯಾಗಿರುವ *ಮಂಗಳವಾರ ರಜಾದಿನ ಚಿತ್ರದ ಟ್ರೇಲರ್ ಜನಮನ ಸೂರೆಗೊಂಡಿದೆ‌. ಡಿಸೆಂಬರ್ ನಲ್ಲಿ ಚಿತ್ರವನ್ನು ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ.