ಮಂಗಳೂರು ಟು ಆಫ್ರಿಕಾ `ಬಾನ ದಾರಿಯಲ್ಲಿ’ ಪಯಣ..

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಹಾಡೊಂದರ ಸಾಲು ಚಿತ್ರದ “ಬಾನ ದಾರಿಯಲ್ಲಿ”  ಶೀರ್ಷಿಕೆ ಆಗಿದೆ. ಅದುವೇ ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ನಿರ್ದೇಶಕ ಪ್ರೀತಂ ಗುಬ್ಬಿ ಕಾಂಬಿನೇಶನ್ ನ ಹೊಸ ಚಿತ್ರ.

 ” ಬಾನ ದಾರಿಯಲ್ಲಿ” ಚಿತ್ರ ‌ಮಂಗಳೂರಿನಲ್ಲಿ ಚಿತ್ರೀಕರಣ ಪೂರ್ಣಗೊಳಿಸಿ ಆಫ್ರಿಕಾದತ್ತ ಪಯಣ ಬೆಳೆಸಲು ಸಜ್ಜಾಗಿದೆ. ಕ್ರೀಡಾ ಹಿನ್ನೆಲೆ ಇರುವ  ಚಿತ್ರದಲ್ಲಿ ಗಣೇಶ್ ಕ್ರಿಕೆಟ್ ಆಟಗಾರನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ನಾಯಕಿ ರುಕ್ಮಿಣಿ ವಸಂತ್ ಈಜುಗಾರ್ತಿ ಪಾತ್ರದಲ್ಲಿ ನಟಿಸುತ್ತಿದ್ದಾರೆ.‌

 ಮಂಗಳೂರಿನಲ್ಲಿ ದ್ವಿತೀಯ ಹಂತದ ಚಿತ್ರೀಕರಣ ಮುಕ್ತಾಯವಾಗಿದದು. ವಾಟರ್‌ ಗೇಮ್ಸ್ ಸೇರಿದಂತೆ ಕೆಲವು ಭಾಗದ ಚಿತ್ರೀಕರಣ ನಾಯಕ ಗಣೇಶ್, ನಾಯಕಿ ರುಕ್ಮಿಣಿ ವಸಂತ್ ಮುಂತಾದವರ ಅಭಿನಯದಲ್ಲಿ ಚಿತ್ರೀಕರಣ ನಡೆದಿದೆ.ಇದೀಗ ಮೂರನೇ ಹಂತದ ಚಿತ್ರೀಕರಣ ಆಫ್ರಿಕಾದಲ್ಲಿ ನಡೆಯಲಿದ್ದು, ಸದ್ಯದಲ್ಲೇ ಚಿತ್ರತಂಡ ಆಫ್ರಿಕಾಗೆ ತೆರಳಲಿದೆ.

ಚಿತ್ರದ ಕಥೆ ಪ್ರೀತಾ ಜಯರಾಂ ಅವರದು. ಮಾಸ್ತಿ ಸಂಭಾಷಣೆ,  ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಅಭಿಲಾಷ್ ಕಲ್ಲತ್ತಿ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ಚಿತ್ರಕ್ಕಿದೆ.  ತಾರಾಬಳಗದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್, ರುಕ್ಮಿಣಿ ವಸಂತ್, ರೀಶ್ಮಾ ನಾಣಯ್ಯ, ರಂಗಾಯಣ ರಘು ಮುಂತಾದವರಿದ್ದಾರೆ‌.