ಮಂಗಳೂರು ಭೇಟಿ ಮೋದಿ ಹರ್ಷ

ಬೆಂಗಳೂರು, ಸೆ.೩- ಮಂಗಳೂರಿನಲ್ಲಿ ನಿನ್ನೆ ನಡೆದ ಕಾರ್ಯಕ್ರಮದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಕನ್ನಡದಲ್ಲೇ ಟ್ವೀಟ್‌ಮಾಡಿ ಹರ್ಷವ್ಯಕ್ತಪಡಿಸಿದ್ದಾರೆ. ೩,೮೦೦ ಕೋಟಿ ರೂ ವೆಚ್ಚದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ದೆಹಲಿಗೆ ವಾಪಸ್ಸಾದ ಬಳಿಕ ಇಂದು ಕನ್ನಡದಲ್ಲೇ ಟ್ವೀಟ್ ಮಾಡಿ ಹಲವು ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ಮನಸೋತಿದ್ದೇನೆ. ಪ್ರಮುಖ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ತಮಗೆ ಸಂತಸ ತಂದಿದೆ ಎಂದು ಟ್ವಿಟರ್‌ನಲ್ಲಿ ಬಣ್ಣಿಸಿದ್ದಾರೆ.
ಮೈದಾನದಲ್ಲಿ ಆಯೋಜನೆಗೊಂಡಿದ್ದ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ಮೋದಿ ಅವರು, ೩,೮೦೦ ಕೋಟಿ ರೂ. ಮೊತ್ತದ ೮ ಯೋಜನೆಗಳಿಗೆ ಚಾಲನೆ ನೀಡಿದ್ದರು.ಮೈದಾನದಲ್ಲಿ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಜನರು ‘ಮೋದಿ… ಮೋದಿ…’ ಎಂಬ ಘೋಷಣೆಗಳನ್ನು ಕೂಗುವ ಮೂಲಕ ಹರ್ಷೋದ್ಗಾರ ಮಾಡಿದ್ದರು.