ಮಂಜುನಾಥ ಸ್ವಾಮಿ ನೂತನ ದೇವಸ್ಥಾನದ ಉದ್ಘಾಟನೆ

ಕುಕನೂರು, ಅ.28: ತಾಲೂಕಿನ ದ್ಯಾಂಪೂರು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನ ಉದ್ಘಾಟನೆ ಹಾಗೂ ದೇವಸ್ಥಾನದಲ್ಲಿ ಶ್ರೀ ಮಂಜುನಾಥ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಶ್ರದ್ಧಾ ಭಕ್ತಿಯಿಂದ ಸೋಮವಾರ ಜರುಗಿತು.ಬೆಳಿಗ್ಗೆಯಿಂದ ದೇವಸ್ಥಾನದಲ್ಲಿ ಧಾರ್ಮಿಕ ಪೂಜಾ ವಿಧಿವಿಧಾನ ಯಲಬುರ್ಗಾದ ಶ್ರೀಧರ ಮುರುಡಿ ಹಿರೇಮಠದ ಶ್ರೀ ಬಸವಲಿಂಗೇಶ್ವರ ಶಿವಾಚಾರ್ಯರ ದಿವ್ಯ ಸಾನಿಧ್ಯದಲ್ಲಿ ಆರಂಭಗೊಂಡವು. ಪೂಜೆ, ಅಭಿಷೇಕ ಜರುಗಿದವು. ಕಳೆದ ಮೂರು ನಾಲ್ಕು ದಿನಗಳಿಂದ ದ್ಯಾಂಪೂರು ಗ್ರಾಮದಲ್ಲಿ ದೇವಸ್ಥಾನ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಸಂಭ್ರಮ ಜೋರಾಗಿತ್ತು. ಸೋಮವಾರ ಬೆಳಿಗ್ಗೆ ದೇವಸ್ಥಾನ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಜರುಗಿತು. ಶ್ರೀ ಬಸವಲಿಂಗೇಶ್ವರ ಶಿವಾಚಾರ್ಯರು ಹಾಗು ಕುಕನೂರಿನ ಶ್ರೀ ಅನ್ನದಾನೀಶ್ವರ ಶಾಖಾ ಮಠದ ಶ್ರೀ ಮಹಾದೇವ ಸ್ವಾಮೀಜಿ ಆಶೀರ್ವಚನ ನೀಡಿದರು. ಗ್ರಾಮಸ್ಥರು ಇದ್ದರು.
One attachment • Scanned by Gmail