ಮಂಡ್ಯದಲ್ಲಿ 21 ಪ್ರಕರಣಗಳಲ್ಲಿ ನಗದು ಹಣ ಜಪ್ತಿ: ಶೇಕ್ ತನ್ವೀರ್ ಆಸಿಫ್

ಮಂಡ್ಯ: ಮೇ.12:- ಕರ್ನಾಟಕ ಸಾರ್ವತ್ರಿಕ ವಿಧಾನಸಭೆ ಚುನಾವಣೆ 2023 ರ ಸಂಬಂಧ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯಲ್ಲಿ 21 ಪ್ರಕರಣಗಳಲ್ಲಿ ನಗದು ಹಣ ಜಪ್ತಿ ಮಾಡಲಾಗಿದ್ದು, ಈ ಕುರಿತಂತೆ ಜಿಲ್ಲಾ ಪಂಚಾಯತ್ ಕಛೇರಿ ಸಭಾಂಗಣದಲ್ಲಿ ಹಣ ಬಿಡುಗಡೆ ಸಮಿತಿಯ ಸಭೆ ನಡೆಯಿತು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಕ್ ತನ್ವೀರ್ ಆಸಿಫ್ ಅವರು ಹಣ ಬಿಡುಗಡೆ ಸಮಿತಿಯ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲೆಯಲ್ಲಿ 21 ಪ್ರಕರಣಗಳಲ್ಲಿ ನಗದು ಹಣ ಜಪ್ತಿ ಮಾಡಲಾಗಿದ್ದು, ಇದರಲ್ಲಿ 2 ಪ್ರಕರಣ 10 ಲಕ್ಷಕ್ಕೂ ಹೆಚ್ಚು ಮೊತ್ತದ ಹಣ ಜಪ್ತಿಯಾಗಿದೆ, ಇದನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಿದ್ದು, ಉಳಿದಂತೆ 19 ಪ್ರಕರಣಗಳನ್ನು ವಾರಸುದಾರರು ಸೂಕ್ತ ದಾಖಲೆ ಒದಗಿಸಿದ ನಂತರ ಸಮಿತಿಯಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಖಜಾನೆಯ ಉಪ ನಿರ್ದೇಶಕ ಸಿದ್ದಲಿಂಗಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.