ಮಂಡ್ಯದಿಂದ ಸ್ಪರ್ಧೆಯಿಲ್ಲ

ಬೆಂಗಳೂರು,ಏ.೧೮:ಈ ಚುನಾವಣೆಯಲ್ಲಿ ನಾನು ಮಂಡ್ಯದಿಂದ ಸ್ಪರ್ಧೆ ಮಾಡಲ್ಲ. ಚೆನ್ನಪಟ್ಟಣ ಬಿಟ್ಟು ಬೇರೆಡೆಯಿಂದ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಿಂದ ಸ್ಪರ್ಧಿಸುವಂತೆ ಕಾರ್ಯಕರ್ತರ ಒತ್ತಡವಿರುವುದು ನಿಜ, ಆದರೆ, ಮಂಡ್ಯದಿಂದ ನಾನು ಸ್ಪರ್ಧಿಸುವುದಿಲ್ಲ ಎಂದರು.
ಮಂಡ್ಯದಲ್ಲಿ ಸಮರ್ಥ ಅಭ್ಯರ್ಥಿಗಳಿದ್ದಾರೆ, ಇಂದು ಮಂಡ್ಯದಲ್ಲಿ ಜೆಡಿಎಸ್ ನಾಯಕರ ಸಭೆ ನಡೆಸಿ ಅಭ್ಯರ್ಥಿಯನ್ನು ಅಂತಿಮ ಮಾಡುತ್ತೇವೆ. ನಾಳೆ ಜೆಡಿಎಸ್ ಅಭ್ಯರ್ಥಿಗಳ ೩ನೇ ಪಟ್ಟಿ ಬಿಡುಗಡೆಯಾಗಲಿದೆ ಎಂದರು.
ಕೊಪ್ಪಳದಲ್ಲಿ ಜೆಡಿಎಸ್ ಸೇರಿರುವ ಸಿ.ವಿ. ಚಂದ್ರಶೇಖರ್ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಚಂದ್ರಶೇಖರ್‌ರವರು ಹಿಂದೆಯೇ ನಾನು ಬಿಜೆಪಿಯಲ್ಲಿ ಭವಿಷ್ಯವಿಲ್ಲ. ತೀರ್ಮಾನ ಮಾಡಿ ಎಂದು ಹೇಳಿದ್ದೆ. ಈಗ ಅವರು ಜೆಡಿಎಸ್ ಸೇರಿದ್ದಾರೆ ಅವರೇ ಅಭ್ಯರ್ಥಿಯಾಗುತ್ತಾರೆ ಎಂದರು.