ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ : ನ್ಯಾ. ರವೀಂದ್ರ ಹೊನೋಲೆ

ಯಾದಗಿರಿ : ಡಿ.9 : ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986, ತಿದ್ದುಪಡಿ ಕಾಯ್ದೆ 2016 ಜಾರಿಯಾದಾಗಿನಿಂದ ಬಾಲಕಾರ್ಮಿಕ ಪದ್ದತಿ ಇನ್ನು ಜೀವಂತವಾಗಿರುವುದು ದುರಂತ. ಪೆÇೀಷಕರು ಮಕ್ಕಳ ಭವಿಷ್ಯವನ್ನು ಯೋಚಿಸಿ ಉತ್ತಮ ಶಿಕ್ಷಣ ನೀಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಗೌರವಾನ್ವಿತ ಶ್ರೀ ರವೀಂದ್ರ ಹೊನೋಲೇ ಅವರು ಹೇಳಿದರು.

ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯಾದಗಿರಿ ಇವರ ಸಂಯುಕ್ತಾಶ್ರಯದಲ್ಲಿ ವಡಗೇರಾ ತಾಲ್ಲೂಕಿನಲ್ಲಿ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986, ತಿದ್ದುಪಡಿ ಕಾಯ್ದೆ 2016ರ ಕುರಿತು ಜಾಗೃತಿ ಹಾಗೂ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ತಹಸೀಲ್ದಾರ್ ಶ್ರೀನಿವಾಸ್ ಚಾಪಲ್ ಅವರು ಮಾತನಾಡಿ,
Pಂಓ-IಓಆIಂ ರಕ್ಷಣೆ ಮತ್ತು ಪುನರ್ವಸತಿ ಅಭಿಯಾನದ ಅಂಗವಾಗಿ ನವೆಂಬರ್ 20 ರಿಂದ ಡಿಸೆಂಬರ್ 10ರ ವರೆಗೆ ನಿರಂತರ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಇದೆ ಸಮಯದಲ್ಲಿ ರೈಡ್ ನಡೆಸಿ ಇಬ್ಬರು ಕಿಶೋರ್ ಕಾರ್ಮಿಕ ಮಕ್ಕಳನ್ನು ರಕ್ಷಿಸಲಾಯಿತು.

ಇದೇ ಸಂದರ್ಭದಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ರಿಯಾಜ್ ಪಟೇಲ್, ತಾಲ್ಲೂಕು ಪಂಚಾಯಿತ್ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ ಸಾಂಗ್ವಾರ, ಶಿಶು ಅಭಿವೃದ್ಧಿ ಯೋಜನಾ ನಿರ್ದೇಶಕರಾದ ಶ್ರೀಮತಿ ಮೀನಾಕ್ಷಿ ಪಾಟೀಲ್, ಕಾರ್ಮಿಕ ನಿರೀಕ್ಷಕರಾದ ಶ್ರೀಮತಿ ಸಾಬೇರಾ ಬೇಗಂ ಸೇರಿದಂತೆ ಇತರರು ಉಪಸ್ಥಿತರಿದ್ದರು.