ರಾಯಚೂರು,ಜೂ.೦೨- ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಬೀವೃದ್ಧಿ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕರವರ ಸಂಯೋಗದಲ್ಲಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಭಾರತ ಸರ್ಕಾರ, ನವದೆಹಲಿರವರ ನಿರ್ದೇಶನದಂತೆ ಜೂ.೦೧ರಿಂದ ಜೂ.೩೦ರವರೆಗೆ ಬಾಲಕಾರ್ಮಿಕ ಪದ್ದತಿ ನಿರ್ಮೂಲನಾ ಅಭಿಯಾನವನ್ನು ಆಯೋಜಿಸಲಾಗಿದ್ದು ಅದರ ಅಂಗವಾಗಿ ನಗರದ ಸಿಯಾತಲಾಬ್, ಸರಕಾರಿ ಪ್ರೌಢ ಶಾಲೆಯಲ್ಲಿ ಜಾಗೃತಿ ಜಾಥವನ್ನು ಹಮ್ಮಿಕೊಳ್ಳಲಾಯಿತು.
ಜಾಥಕ್ಕೆ ಜಿಲ್ಲಾ ಕನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದಯಾನಂದ ಎಂ.ಬೇಲೂರೆ ಚಾಲನೆ ನೀಡಿ ಮಾತನಾಡಿ, ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು. ಯಾವುದೇ ಕಾರಣಕ್ಕೂ ಮಕ್ಕಳು ಶಾಲೆಯಿಂದ ಹೊರಗುಳಿದು ಬಾಲಕಾರ್ಮಿಕರಾಗದಂತೆ ನೋಡಿಕೊಳ್ಳಬೇಕೆಂದು ಹೇಳಿದರು.
ಜಾಗೃತಿ ಜಾಥವು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಘೋಷಣೆ, ಸ್ಟಿಕರ್‍ಸ್, ಕರಪತ್ರಗಳನ್ನು ಹಂಚುವುದರ ಮೂಲಕ ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಆರತಿ, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮಂಜುನಾಥರೆಡ್ಡಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮನ್ಸೂರ್ ಅಹ್ಮದ, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ಭಂಡಾರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಮ್.ಡಿ.ಗೋಕುಲ್ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.