ಮಕ್ಕಳಿಗೆ ತಪ್ಪದೇ ಇಂದ್ರಧನುಷ್ ಲಸಿಕೆ ಹಾಕಿಸಿ

ಕಲಬುರಗಿ:ಆ.8: ದಡಾರ್, ರುಬೆಲ್ಲಾ ಕಾಯಿಲೆಗಳು ಸೇರಿದಂತೆ ಮಕ್ಕಳಿಗೆ ಬರುವ ಮತ್ತಿತರ ಕಾಯಿಲೆಗಳನ್ನು ತಡೆಗಟ್ಟಲು ಮಕ್ಕಳಿಗೆ ತಪ್ಪದೇ ಇಂದ್ರದನುಷ್ ಲಸಿಕೆಯನ್ನು ಹಾಕಿಸಬೇಕು ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್.ಕೇಶ್ವಾರ ಹೇಳಿದರು.

ನಗರದ ಶೇಖರೋಜಾದಲ್ಲಿನ ‘ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ’ದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ಸಹಯೋಗದೊಂದಿಗೆ ಸೋಮವಾರ ಹಮ್ಮಿಕೊಂಡಿದ್ದ ‘ಇಂದ್ರದನುಷ್-5 ಅಭಿಯಾನಕ್ಕೆ ಮಗುವಿಗೆ ಲಸಿಕೆ ನೀಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.

ಕಾರ್ಯಕ್ರಮದಲ್ಲಿ ಬಳಗದ ಅಧ್ಯಕ್ಷ, ಉಪನ್ಯಾಸಕ ಎಚ್.ಬಿ.ಪಾಟೀಲ, ಪ್ರಮುಖರಾದ ಶಿವಯೋಗಪ್ಪ ಬಿರಾದಾರ, ಆರೋಗ್ಯ ಕೇಂದ್ರದ ಸಿಬ್ಬಂದಿಗಳಾದ ನಾಗೇಶ್ವರಿ ಮುಗಳಿವಾಡಿ, ಮಂಗಲಾ ಚಂದಾಪುರೆ, ಚಂದಮ್ಮಾ ಮರಾಠಿ, ಲಕ್ಷ್ಮೀ ಮೈಲಾರಿ, ಗಂಗಾಜ್ಯೋತಿ ಗಂಜಿ, ನಾಗೇಶ್ವರಿ ಮುಗಳಿವಾಡಿ, ಅರ್ಚನಾ, ಜಗನ್ನಾಥ ಗುತ್ತೇದಾರ, ರೇಷ್ಮಾ ನಕ್ಕುಂದಿ, ಗುರುರಾಜ ಕೈನೂರ್, ಚಂದ್ರಕಲಾ ಮಠಪತಿ, ಅರ್ಚನಾ ಸಿಂಗೆ, ಸಂಗೀತಾ, ನಾಗಮ್ಮ ಚಿಂಚೋಳಿ ಸೇರಿದಂತೆ ಮತ್ತಿತರರಿದ್ದರು.