
ಕೋಲಾರ.ಆ,೨೨:ನಗರದ ಸುವರ್ಣ ಸೆಂಟ್ರಲ್ ಶಾಲೆಯಲ್ಲಿ ೭೭ನೇ ಸ್ವಾತಂತ್ರ್ಯ ದಿನಾಚರಣೆ ಸಪ್ತಾಹದ ಪ್ರಯುಕ್ತ ನಿವೃತ್ತ ಮಾಜಿ ಯೋಧ ಜನಾರ್ಧನ್ ಪಾಲ್ಗೊಂಡಿದ್ದರು.
ನಂತರ ಮಾತನಾಡಿ ಮಕ್ಕಳಿಗೆ ಜೀವನದಲ್ಲಿ ಶಿಸ್ತು,ಸಮಯಪಾಲನೆಯನ್ನುರೂಢಿಸಿಕೊಂಡು ಗುರು ಹಿರಿಯರಿಗೆ ಗೌರವ ಕೊಡಬೇಕು ಪೌಷ್ಠಿಕ ಆಹಾರಸೇವನೆ ಮಾಡಿ ಆರೋಗ್ಯ ಕಾಪಾಡಿಕೊಳ್ಳಬೇಕು ದೇಶಾಭಿಮಾನ ಬೆಳೆಸಿಕೊಳ್ಳಬೇಕು.ಕಸ ವಿಲೇವಾರಿ ಸರಿಯಾಗಿ ಮಾಡಿ ಗಾಂಧೀಜಿಯವರ ಸ್ವಚ್ಛ ಭಾರತ ಕಲ್ಪನೆಯನ್ನು ಸಾಕಾರಗೊಳಿಸಬೇಕೆಂದು ಹೇಳಿದರು.
ಕಾರ್ಗಿಲ್ ಯುದ್ಧದಲ್ಲಿ ಪಾಲ್ಗೊಂಡಿದ್ದ ಅವರ ಅನುಭವಗಳನ್ನು ಮಕ್ಕಳೊಂದಿಗೆ ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು ಮತ್ತು ಮಕ್ಕಳು ಭಾಗಿಯಾಗಿದ್ದರು.