ಮಕ್ಕಳು ಉನ್ನತ ಸಾಧನೆ ಮಾಡುವ ಗುರಿಯಿಟ್ಟುಕೊಂಡು ವ್ಯಾಸಂಗ ಮಾಡಬೇಕು:ಡಾ. ಶೈಲೇಂದ್ರ ಬೆಲ್ದಾಳೆ

ಬೀದರ:ಫೆ.7:ಸರಳತೆ, ಸಜನ ಶೀಲತೆ ಮತ್ತು ಪರಿಶೋಧಕತೆಗಳು ಒಟ್ಟುಗೂಡಿ ಸಾಹಸ ಮತ್ತು ಸವಾಲುಗಳನ್ನ್ನು ಎದುರಿಸುವ ಆತ್ಮಸ್ಥೆರ್ಯವನ್ನು ವಿದ್ಯಾರ್ಥಿಗಳಲ್ಲಿ ಬೆಳೆಯಬೇಕು ಪೆÇೀಷಕರು ತಮ್ಮ ಮಕ್ಕಳ ಏಳಿಗೆಗಾಗಿ ಕಷ್ಟಪಟ್ಟು ದುಡಿಯುತ್ತಿದ್ದಾರೆ. ಮಕ್ಕಳ ಭವಿಷ್ಯ ಉತ್ತಮಗೊಳಿಸಲು ಎಲ್ಲ ತ್ಯಾಗಕ್ಕೆ ಮುಂದಾಗಿದ್ದಾರೆ. ಮುಂದೆ ಪೆÇೀಷಕರು ಖುಷಿ ನೆಮ್ಮದಿಯಿಂದ ಇರುವಂತೆ ನೋಡಿಕೊಳ್ಳುವದು ಮಕ್ಕಳ ಜವಾಬ್ದಾರಿ ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ ಅವರು ವಿದ್ಯಾರ್ಥಿಗಳಿಗೆ ತಿಳಿಸಿದರು.

ಬೀದರ್ ನಗರದ ಪ್ರತಾಪನಗರದಲ್ಲಿರುವ ಶಾಸಕರ ಕಚೇರಿಯಲ್ಲಿ ಬೀದರ್ ದಕ್ಷಿಣ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿವಿಧ ಗ್ರಾಮಗಳ ಸುಮಾರು 19 ವಿದ್ಯಾರ್ಥಿಗಳಿಗೆ ಕಾರ್ಮಿಕ ಇಲಾಖೆಯ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರ ಪ್ರತಿಭಾವಂತ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಿಸಿ ಮಾತನಾಡಿದರು.

ಕಟ್ಟಡ ಕಾರ್ಮಿಕರು ಶ್ರಮಜೀವಿಗಳು. ಆದರೂ ಎಷ್ಟೇ ಕಷ್ಟವಾದರೂ ಮಕ್ಕಳಿಗೆ ಶಿಕ್ಷಣ ಕೊಡಿಸುತ್ತಾರೆ. ಆದ್ದರಿಂದ ಸರ್ಕಾರ ನೀಡುತ್ತಿರುವ ಸೌಲಭ್ಯವನ್ನು ವಿದ್ಯಾರ್ಥಿಗಳು ಬಳಸಿಕೊಂಡು ಸಾಧನೆ ಮಾಡಬೇಕು ಎಂದರು. ಪಾಲಕರು ತಮಗೆ ಎಷ್ಟೇ ನೋವಿದ್ದರೂ ಮಕ್ಕಳಿಗಾಗಿಯೇ ಬದುಕುತ್ತಿರುತ್ತಾರೆ. ಜತೆಗೆ ಉತ್ತಮ ಸಾಧನೆ ಮಾಡಬೇಕೆಂಬ ಆಸೆ ಹೊಂದಿರುತ್ತಾರೆ. ಅದಕ್ಕಾಗಿ ಹಗಲಿರುಳು ದುಡಿಯುತ್ತಾರೆ. ಈ ಹಿನ್ನೆಲೆಯಲ್ಲಿ ಮಕ್ಕಳು ಉನ್ನತ ಸಾಧನೆ ಮಾಡುವ ಗುರಿಯಿಟ್ಟುಕೊಂಡು ವ್ಯಾಸಂಗ ಮಾಡಬೇಕು ಎಂದು ಸಲಹೆ ನೀಡಿದರು.

ಕಾರ್ಮಿಕರ ಇಲಾಖೆಯ ಹಲವಾರು ಯೋಜನೆಗಳು ಕಾರ್ಮಿಕರಿಗೆ ತಿಳಿಯದೆ ವಿಫಲಗೊಳ್ಳುತ್ತವೆ ಆದ್ದರಿಂದ, ಕಟ್ಟಡ ಕಾರ್ಮಿಕರನ್ನು ಗುರುತಿಸಿ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳ ಬಗ್ಗೆ ಸೂಕ್ತ ಮಾಹಿತಿ ನೀಡಬೇಕು. ಆಗ ಈ ವರ್ಗದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಪಾಲಕರಿಗೆ ಹಾಗೂ ಸಮಾಜಕ್ಕೆ ಹೆಸರು ತರುವಂಥವರಾಗುತ್ತಾರೆಂದರು ಹೀಗಾಗಿ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳ ಬಗ್ಗೆ ಕಟ್ಟಡ ಕಾರ್ಮಿಕರಿಗೆ ಅಧಿಕಾರಿಗಳು ಸೂಕ್ತ ತಿಳಿವಳಿಕೆ ಮೂಡಿಸುವ ಕೆಲಸ ಮಾಡಬೇಕು ಎಂದು ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆ ಅಧಿಕಾರಿಗಳು ಶ್ರೀಹರಿ ದೇಶಪಾಂಡೆ, ಸುವರ್ಣಾ ವಿದ್ಯಾರ್ಥಿಗಳ ಪಾಲಕರು ಮತ್ತಿತರರು ಉಪಸ್ಥಿತರಿದ್ದರು.