ಮಕ್ಕಳು ದೇವರ ಸ್ವರೂಪಃ ಫಯಾಜ ಕಲಾದಗಿ

ವಿಜಯಪುರ : ನ.15:ಮಕ್ಕಳು ದೇವರ ಸ್ವರೂಪ. ಅವರ ಮನಸ್ಸಿ ಕಪಟವೆನ್ನುವುದು ಇರುವುದಿಲ್ಲ. ಅವರು ನಿಜವಾದ ದೇವರ ಸಮಾನ ಎಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರಾದ ಫಯಾಜ ಕಲಾದಗಿ ಹೇಳಿದರು.
ಅವರು ನಗರದ ನ್ಯೂ ಬ್ರಿಲಿಯಂಟ್ ಪಬ್ಲಿಕ್ ಶಾಲೆಯಲ್ಲಿ ಕೇಕ್ ಕತ್ತರಿಸುವ ಮೂಲಕ ಮಕ್ಕಳ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಪಾಲಕರು ಪ್ರತಿಯೊಬ್ಬರು ಕಾಳಜಿ ವಹಿಸಬೇಕು. ಇಂದಿನ ಜಗತ್ತಿನಲ್ಲಿ ಮೊಬೈಲ್‍ಗೆ ಮಾರು ಹೋಗಿ ಮಕ್ಕಳ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು ಎಂದು ಪಾಲಕರಿಗೆ ಕಿವಿ ಮಾತು ಹೇಳಿದರು. ದೇಶಕ್ಕಾಗಿ ನಾವೇನು ಕೊಟ್ಟಿದ್ದೇವೆ ಎನ್ನುವುದನ್ನು ನಾವು ಆತ್ಮಾವಲೋಕನ ಮಾಡಿಕೊಂಡು ದೇಶಕ್ಕೆ ಏನಾದರು ಕೊಡುಗೆ ನೀಡಬೇಕಾಗಿರುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು. ಆದ್ದರಿಂದ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ನೀಡಿ ಬೆಳೆಸುವುದು ಪಾಲಕರ, ಪೋಷಕರ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಪುನೀತ ಬಿರಾದಾರ ಅಧ್ಯಕ್ಷತೆ ವಹಿಸಿದ್ದರು.ವೇದಿಕೆಯಲ್ಲಿ ಶಿವಾನಂದ ದುದ್ದಗಿ ಇದ್ದರು.
ಕಾರ್ಯಕ್ರಮದಲ್ಲಿ ಬಸವರಾಜ ಬಿ.ಕೆ, ಪಿದಾ ಕಲಾದಗಿ, ಜಯಶ್ರೀ ಕನ್ನೇರಿ, ವಿಜಯ ಲಕ್ಷ್ಮೀ, ಶ್ವೇತಾ, ಇಸ್ಮಾಯಿಲ್ ಬಾಗೇವಾಡಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.