ಮಕ್ಕಳ ಆರೋಗ್ಯದ ಬಗ್ಗೆ ನಿಗಾವಹಿಸುವಂತೆ ಸಚಿವ ಸೂಚನೆ

ರಾಯಚೂರು,ಜು.೦೧-
ರಾಯಚೂರು ತಾಲೂಕಿನ ಅಪ್ಪನದೊಡ್ಡಿ ಗ್ರಾಮದಲ್ಲಿ ಬಿಸಿಯೂಟ ಸೇವಿಸಿ ಅಸ್ವಸ್ಥರಾದ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ನಿಗಾ ವಹಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಮತ್ತು ಜಿಲ್ಲಾಧಿಕಾರಿಗೆ ಸಣ್ಣ ನೀರಾವರಿ ಮತ್ತು ವಿಜ್ಞಾನ ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜ್ ಸೂಚನೆ ನೀಡಿದ್ದಾರೆ.
ರಾಯಚೂರು ತಾಲೂಕಿನ ಅಪ್ಪನದೊಡ್ಡಿಯಲ್ಲಿ ಬಿಸಿಯೂಟ ಸೇವಿಸಿ ಅಸ್ವಸ್ಥರಾದ ೪೯ ವಿದ್ಯಾರ್ಥಿಗಳ ಪ್ರಕರಣದ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಬಿಸಿಯೂಟದ ಬಗ್ಗೆ ಆಯಾ ಶಾಲಾ ಮುಖ್ಯಸ್ಥರು ಮತ್ತು ಬಿಟಿಯೂಟ ಅಡುಗೆಯಾಳಗಳು ಸೂಕ್ತ ಸ್ವಚ್ಛತಾ ಮುಂಜಾಗೃತ ಕ್ರಮ ಕೈಗೊಳ್ಳಲು ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡುವಂತೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ? ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕಾಧಿಕಾರಿಗೆ ಸೂಚಿಸಿದ್ದಾಗಿ ಸಚಿವ ಎನ್.ಎಸ್.ಬೋಸರಾಜ್ ತಿಳಿಸಿದರು.
ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ಬಿಸಿಯೂಟಕ್ಕೆ ಅಗತ್ಯ ವ್ಯವಸ್ಥೆ ಮತ್ತು ಅಡುಗೆ ಮಾಡಲು ಶುದ್ದ ನೀರು, ಅಡುಗೆ ಕೊಠಡಿಯಲ್ಲಿ ಕ್ರಿಮಿ ಕೀಠಗಳು ಇರದಂತೆ ಅಗತ್ಯ ಕ್ರಮ ವಹಿಸಲು ಆಯಾ ಶಾಲಾ ಮುಖ್ಯೋಪಾಧ್ಯಾಯರಿಗೆ ನಿರ್ದೇಶನ ನೀಡಬೇಕು, ಪ್ರತಿ ದಿನಾಲೂ ಅಡುಗೆ ಮಾಡಿದ ತಕ್ಷಣ ಸಂಬಂಧಿಸಿದ ಅಡುಗೆಯಾಳು, ಶಾಲೆ ಮುಖ್ಯಸ್ಥರು ತಪಾಸಣೆ ಮಾಡಲು ನಿರ್ದೇಶನ ನೀಡಿರುವುದಾಗಿ ಹೇಳಿದರು.
ಅಲ್ಲದೆ, ಈಗ ಅಸ್ವಸ್ಥರಾಗಿರುವ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ನಿಗಾ ವಹಿಸಲು ರಿಮ್ಸ್ ಆಸ್ಪತ್ರೆಯ ಮುಖ್ಯಸ್ಥರಿಗೆ ಅಗತ್ಯ ಚಿಕಿತ್ಸೆಗೆ ಸೂಚಿಸಬೇಕು ಮತ್ತು ಗ್ರಾಮದಲ್ಲಿರುವ ಕೆಲ ವಿದ್ಯಾರ್ಥಿಗಳು ಅಲ್ಪ ಪ್ರಮಾಣದಲ್ಲಿ ಅಸ್ವಸ್ಥಗೊಂಡವರ ತಪಾಸಣೆಗೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಸೂಚಿಸಿದ್ದಾಗಿ ಬೋಸರಾಜ್ ಮಾಹಿತಿ ನೀಡಿದರು.
ವಿಶೇಷವಾಗಿ ವಸತಿ ನಿಲಯಗಳಲ್ಲೂ ವಿದ್ಯಾ?ರ್ಥಿಗಳಿಗೆ ಆಹಾರ ವಿತರಿಸುವ ಮುನ್ನ ಅಲ್ಲಿಯೂ ಇಂತಹ ಘಟನೆಗಳು ಮರುಕಳಿಸದಂತೆ ಮುಂಜಾಗ್ರತೆ ವಹಿಸಬೇಕು ಮತ್ತು ಆಕಸ್ಮಿಕವಾಗಿ ವಿದ್ಯಾ?ರ್ಥಿಗಳು ಕಲುಷಿತ ಕುಡಿಯುವ ನೀರು, ಆಹಾರದಿಂದ ಸಮಸ್ಯೆಯಾದರೆ ತಕ್ಷಣ ಆರೋಗ್ಯಾಧಿಕಾರಿಗಳು ಸೂಕ್ತ ಚಿಕಿತ್ಸೆ ವ್ಯವಸ್ಥೆ ಮಾಡಲು ಆಯಾ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿಗಳಿಗೆ ನಿರ್ದೇಶನ ನೀಡಲು ತಿಳಿಸಿದ್ದಾಗಿ ಹೇಳಿದರು.