ಕೋಲಾರ, ಮಾ. ೨೭- ತಾಲ್ಲೂಕಿ ನಾದ್ಯಂತ ಮಾ.೨೭ ರಿಂದ ಏ.೧ ರವರೆಗೂ ೫ ಮತ್ತು ೮ನೇ ತರಗತಿ ಮಕ್ಕಳಿಗೆ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ ವತಿಯಿಂದ ಮೌಲ್ಯಂಕನ ನಡೆಯುತ್ತಿದ್ದು ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣಗೊಳಿಸುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎನ್.ಕನ್ನಯ್ಯ ಸ್ಪಷ್ಟಪಡಿಸಿದರು.
ನಗರದ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಶಿಕ್ಷಣ ಸಂಯೋಜಕರು, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಿಗೆ ಮೌಲ್ಯಂಕನಕ್ಕೆ ಸಂಬಂಧಿಸಿದಂತೆ ನಡೆದ ಪೂರ್ವಸಿದ್ದತಾ ಸಭೆಯ ನಂತರ ಅವರು ಮಾತನಾಡುತ್ತಿದ್ದರು.
ಇದು ಶೈಕ್ಷಣಿಕ ಪ್ರಗತಿಗೆ ಪೂರಕ ವಾತಾವರಣ ಸೃಷ್ಟಿಗೆ ಕಾರಣವಾಗಿರುವ ಕುರಿತು ಪೋಷಕರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ, ಶಿಕ್ಷಕರು,ಮಕ್ಕಳು,ಪೋಷಕರಲ್ಲಿ ಯಾವುದೇ ಗೊಂದಲಕ್ಕೆ ಅವಕಾಶವಿಲ್ಲ ಎಂದು ತಿಳಿಸಿದರು.
೫ ಮತ್ತು ೮ನೇ ತರಗತಿಗೆ ನಡೆಯುತ್ತಿರುವ ಈ ಮೌಲ್ಯಾಂಕನದಲ್ಲಿ ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣಗೊಳಿಸುವುದಿಲ್ಲ ಮತ್ತು ಮುಂದಿನ ತರಗತಿಗೆ ತೇರ್ಗಡೆಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಈ ಮೌಲ್ಯಾಂಕನವೂ ವಾರ್ಷಿಕ ಪರೀಕ್ಷೆಯಾಗಿರುವುದಿಲ್ಲ, ಇದು ಕೇವಲ ಮೌಲ್ಯಾಂಕನವಾಗಿರುತ್ತದೆ, ಈ ಮೌಲ್ಯಾಂಕನದ ಮೂಲಕ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ, ಕಲಿಕಾ ನ್ಯೂನ್ಯತೆ, ಕಲಿಕಾ ಪ್ರಗತಿ ತಿಳಿದುಕೊಂಡು ಮುಂದಿನ ಶೈಕ್ಷಣಿಕ ವರ್ಷಕ್ಕೆ ಕಲಿಕಾ ಕೊರತೆ ನೀಗಿಸಲು ಶೈಕ್ಷಣಿಕ ಕಾರ್ಯಕ್ರಮ ಹಮ್ಮಿಕೊಳ್ಳುವುದು ಇದರ ಉದ್ದೇಶವಾಗಿದೆ ಎಂದು ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಅವರು ಮನವರಿಕೆ ಮಾಡಿಕೊಟ್ಟಿದ್ದಾರೆ.
ಶಿಕ್ಷಣ ಸಂಯೋಜಕ ಕೆ.ಶ್ರೀನಿವಾಸ್ ಮಾತನಾಡಿ, ಮೌಲ್ಯಂಕನ ಪ್ರಶ್ನೆಪತ್ರಿಕೆಗಳನ್ನು ಆಯಾ ಕ್ಲಸ್ಟರ್ ಸಂಪನ್ಮೂಲ ಕೇಂದ್ರಗಳಿಂದ
ಕ್ಷೇತ್ರ ಸಮನ್ವಯಾಧಿಕಾರಿ ಪ್ರವೀಣ್ ಮಾತನಾಡಿ, ಈ ಮೌಲ್ಯಾಂಕನ ಫಲಿತಾಂಶವನ್ನು ಸಂಬಂಧಿಸಿದ ಪೋಷಕರು,ವಿದ್ಯಾರ್ಥಿಗಳಿಗೆ ಮಾತ್ರ ತಿಳಿಸಲಾಗುವುದು, ಈ ಮೂಲಕ ಫಲಿತಾಂಶದ ಗೌಪ್ಯತೆಯನ್ನು ಕಾಪಾಡಲಾಗುವುದು ಎಂದು ತಿಳಿಸಿರುವ ಅವರು, ಪಠ್ಯಪುಸ್ತಕವನ್ನಾಧರಿಸಿ ಮೌಲ್ಯಾಂಕನಕ್ಕೆ ಪ್ರಶ್ನೆಗಳನ್ನು ಸಿದ್ದಪಡಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.