ಮಕ್ಕಳ ಜ್ಞಾನಾಭಿವೃದ್ಧಿಯೇ ದೇಶದ ಅಭಿವೃದ್ಧಿ

ಧಾರವಾಡ, ಮಾ.28: ಮಕ್ಕಳನ್ನು ದೇಶದ ಪ್ರಜ್ಞಾವಂತ ನಾಗರಿಕರನ್ನಾಗಿ ಮಾಡೋಣ, ಮಕ್ಕಳಿಗೆ ಆಸ್ತಿ ಮಾಡಬಾರದು. ಮಕ್ಕಳನ್ನೇ ದೇಶದ ಅಸ್ತಿಯನ್ನಾಗಿಸಬೇಕು. ಮಕ್ಕಳ ಕಾರ್ಯ ಚಟುವಟಿಕೆಗಳಿಗೆ ಪೆÇ್ರೀತ್ಸಾಹ ನೀಡಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲಿಕರಣ ಸಚಿವರು ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಆಚಾರ ಹಾಲಪ್ಪ ಬಸಪ್ಪ ಅವರು ಹೇಳಿದರು.
ಯಾಲಕ್ಕಿ ಶೆಟ್ಟರ್ ಕಾಲೋನಿಯಲ್ಲಿರುವ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಕಚೇರಿ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಸಹಯೋಗದಲ್ಲಿ ನಿರ್ಮಿಸಿರುವ ನೂತನ ಸಭಾಭವನ (ಅಡಿಟೋರಿಯಂ) ಉದ್ಘಾಟನೆ ಮತ್ತು 2019-2020, 2020-2021 ಹಾಗೂ 2021-22ನೇ ಸಾಲಿನ ಅಕಾಡೆಮಿ ಗೌರವ ಪ್ರಶಸ್ತಿ, ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ, ಅಕಾಡೆಮಿ ಬಾಲಗೌರವ ಪ್ರಶಸ್ತಿ ಹಾಗೂ ವಿಶೇಷ ಗೌರವ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳಿಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ಬೆಳೆಯಲು ಅವಕಾಶ ನೀಡಿ ಪೆÇ್ರೀತ್ಸಾಹಿಸಬೇಕು. ಮಹಿಳೆಯರಿಗೆ ಮತ್ತು ಮಕ್ಕಳಿಗೆ ಸರ್ಕಾರದಿಂದ ಹಲವಾರು ವಿಶೇಷ ಕಾರ್ಯಕ್ರಮಗಳನ್ನು ಅನುμÁ್ಠನಗೊಳಿಸಲಾಗಿದೆ. ಮಕ್ಕಳಿಗೆ ಸಾಧನೆ ಮಾಡಲು ಆತ್ಮಸ್ಥೈರ್ಯ ತುಂಬಬೇಕು. ಸರ್ಕಾರದಿಂದ ಅನುಮೋದನೆಗೊಂಡ ಯೋಜನೆಗಳನ್ನು ಸರಿಯಾಗಿ ಅನುಷ್ಠಾನಗೊಳಿಸಿ, ಅಭಿವೃದ್ಧಿ ಸಾಧಿಸಬೇಕು ಎಂದು ಅವರು ಹೇಳಿದರು.
ಸಂಗೀತ, ನೃತ್ಯ, ಕ್ರೀಡೆ, ಚಿತ್ರಕಲೆ, ವಿಜ್ಞಾನ ಕ್ಷೇತ್ರ, ಬರವಣಿಗೆ, ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಬಹುಮುಖ ಪ್ರತಿಭೆಗಳ ಮಕ್ಕಳಿಗೆ ಅಕಾಡೆಮಿ ಬಾಲಗೌರವ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಮಕ್ಕಳ ಕ್ಷೇತ್ರದಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ಸಾಹಿತಿಗಳಿಗೆ ಹಾಗೂ ಗಣ್ಯ ವ್ಯಕ್ತಿಗಳಿಗೆ ಕೊಡಮಾಡುವ ಅಕಾಡೆಮಿ ಗೌರವ ಪ್ರಶಸ್ತಿ ಮತ್ತು ಮಕ್ಕಳ ಚಂದಿರ ಪುಸ್ತಕ ಪ್ರಶಸ್ತಿ ನೀಡಿ ಸಚಿವ ಆಚಾರ ಹಾಲಪ್ಪ ಬಸಪ್ಪ ಅವರು ಸನ್ಮಾನಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸುರೇಶ ಇಟ್ನಾಳ್, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಲೋಕೇಶ ಜಗಲಾಸರ್, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತ ಡಾ.ಗೋಪಾಲಕೃಷ್ಣ ಬಿ., ಹಿರಿಯ ಸಾಹಿತಿ ಡಾ.ಸಿದ್ದಲಿಂಗ ಪಟ್ಟಣಶೆಟ್ಟಿ, ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.