
(ಸಂಜೆವಾಣಿ ವಾರ್ತೆ)
ಔರಾದ :ಆ.19: ತಾಲೂಕಿನ ಭಂಡಾರಕುಮಟಾ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ರಾಷ್ಟೀಯ ಪೆÇೀಷಣ ಅಭಿಯಾನ ಕಾರ್ಯಕ್ರಮ ಜರುಗಿತು.
ಶಾಲೆಯ ಮಾಜಿ ವಿದ್ಯಾರ್ಥಿ ಸಂಗೀತಾ ಮಂಡ್ಲಾಪೂರೆ ಮಕ್ಕಳಿಗೆ ಪೌಷ್ಟಿಕ ಆಹಾರ ಅತ್ಯಗತ್ಯ, ಹಿಂದೆ ಸಿರಿಧಾನ್ಯಗಳು, ತರಕಾರಿಗಳನ್ನು ಹೆಚ್ಚಾಗಿ ಬಳಸುವ ಮೂಲಕ ನಮ್ಮ ಹಿರಿಯರು ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಂಡಿದ್ದರು. ಆದರೆ ಈಗಿನ ಮಕ್ಕಳು ತರಕಾರಿಗಳನ್ನು ತೆಗೆದಿಟ್ಟು ಊಟ ಮಾಡುತ್ತಿರುವ ಬೆಳವಣಿಗೆ ಹೆಚ್ಚಾಗುತ್ತಿದೆ ಆದ್ದರಿಂದ ಪೌಷ್ಟಿಕ ಆಹಾರ ಧಾನ್ಯಗಳ ಬಳಕೆ ಹೆಚ್ಚಾಗಬೇಕಿದೆ, ಇದರಿಂದ ಮಕ್ಕಳ ದೈಹಿಕ ಕ್ಷಮತೆ ಹಾಗೂ ಕ್ರಿಯಾಶೀಲತೆ ವೃದ್ಧಿಯಾಗುತ್ತದೆ ಎಂದು ತಿಳಿಸಿದರು.
ಮುಖ್ಯ ಶಿಕ್ಷಕ ಚಂದ್ರಕಾಂತ ನಿರ್ಮಳೆ ಅವರು ಮಾತನಾಡಿ, ಮಕ್ಕಳು ಹಸಿವಿನಿಂದ ಬಳಲಬಾರದು ಎಂದು ಸರ್ಕಾರ ಮಧ್ಯಾಹ್ನದ ಬಿಸಿಯೂಟ ನೀಡುತ್ತಿದೆ. ಮಕ್ಕಳು ಪೌಷ್ಟಿಕಾಂಶ ಆಹಾರಗಳನ್ನು ಸೇವಿಸಬೇಕು. ಆಹಾರ ಪದಾರ್ಥಗಳನ್ನು ವ್ಯರ್ಥ ಮಾಡಬಾರದು ಎಂದು ಹೇಳಿದರು. ಈ ಸಂದರ್ಭದಲ್ಲಿ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಶೇಂಗಾ ಬೆಲ್ಲದ ಚಿಕ್ಕಿ ನೀಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಿಬಾಯಿ ದೇವಿದಾಸ, ಎಸ್ಡಿಎಂಸಿ ಅಧ್ಯಕ್ಷ ರಾಜೇಂದ್ರ ಬಿರಾದಾರ, ಶ್ರೀರಂಗರಾವ್ ಭೈರಾಳೆ, ಜೈದೇವ ಮೇತ್ರೆ, ಬಾಬುರಾವ ಮೇತ್ರೆ, ಗುರುಪಾದ ಮಂಡ್ಲಾಪುರೆ, ಶಿವಮೂರ್ತಿ ಜೀರ್ಗೆ, ಮುರಳೀಧರ ಮೇತ್ರೆ, ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ದೇವಿದಾಸ ರಾಠೋಡ ನಿರೂಪಿಸಿದರು, ಶರಣಪ್ಪ ನಾಯ್ಕರ ವಂದಿಸಿದರು.