ಮಕ್ಕಳ ಪರಿಣಾಮಕಾರಿ ಕಲಿಕೆಗೆ ಅಗತ್ಯ ಶಿಕ್ಷಕರನ್ನು ನಿಯೋಜಿಸಿ

ಹುಮನಾಬಾದ್:ಜೂ.15:ತಾಲೂಕಿನ ದುಬಲಗುಂಡಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕನ್ನಡ ಮಾಧ್ಯಮ ಮತ್ತು ಆಂಗ್ಲ ಮಾಧ್ಯಮದ ಪಬ್ಲಿಕ್ ಶಾಲೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಭೇಟಿ ನೀಡಿ ಅಲ್ಲಿಯ ವ್ಯವಸ್ಥೆ ಪರಿಶೀಲಿಸಿದರು.
ಬುಧವಾರ ಬೆಳಿಗ್ಗೆ ಶಾಲಾ ಮಕ್ಕಳ ಪ್ರಾರ್ಥನೆಯ ಸಮಯದಲ್ಲಿ ಭಾಗಿಯಾದ ಅವರು ನಂತರ ಅಲ್ಲಿಯ ಕುಂದು ಕೊರತೆ ಪರೀಶಿಲಿಸಿದರು.
ಕÀನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ಸುಮಾರು 70 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ ಮಕ್ಕಳ ಬೋಧನೆಗೆ ಒಬ್ಬರೇ ಶಿಕ್ಷಕರು ಇರುವುದು ಕಂಡು ಆಯೋಗದ ಸದಸ್ಯ ಶಶಿಧರ ಕೋಸಂಬೆ ಅಸಮಧಾನ ವ್ಯಕ್ತ ಪಡಿಸಿ, ಪ್ರಾಥಮಿಕ ಹಂತದ ಶಿಕ್ಷಣ ಮಕ್ಕಳ ಕಲಿಕೆಗೆ ಭದ್ರ ಬುನಾದಿ ಒದಗಿಸುತ್ತದೆ.
ಆದರೆ ಒಬ್ಬ ಶಿಕ್ಷಕ ಇದ್ದರೇ ಶಿಕ್ಷಣದ ವ್ಯವಸ್ಥೆ ಹೇಗೆ ಸುಧಾರಿಸುತ್ತದೆ. 1 ರಿಂದ 7ನೇ ತರಗತಿ ವರೆಗೆ ಎರಡು ಮಾಧ್ಯಮದ ಮಕ್ಕಳಿಗೆ ಒಬ್ಬ ಶಿಕ್ಷಕರು ಬೋಧನೆ ಮಾಡಲು ಸಾಧ್ಯನಾ ಎಂದು ಪ್ರಶ್ನಿಸಿದ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಯಾಕೆ ವ್ಯವಸ್ಥೆ ಸುಧಾರಿಸುತ್ತಿಲ್ಲ ಎಂದು ಅಸಮಧಾನ ಹೊರಹಾಕಿದ ಅವರು ಕೂಡಲೇ ಶಿಕ್ಷಣ ಇಲಾಖೆ ಅಗತ್ಯ ಶಿಕ್ಷಕರ ನಿಯೋಜನೆಗೆ ಮುಂದಾಗಬೇಕು ಇಲ್ಲದಿದ್ದರೆ ಮೇಲಧಿಕಾರಿಗಳ ಗಮನಕ್ಕೆ ವರದಿ ಸಲ್ಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗುರುರಾಜ್, ತಾಲೂಕು ಶಿಶು ಅಭಿವೃದ್ಧಿ ಯೋಜನಾ