
ದಾವಣಗೆರೆ; ಏ. 24; ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಭಾನುವಾರ ಮೇ 10 ರಂದು ತಪ್ಪದೇ ಮತದಾನ ಮಾಡಿರಿ, ಮತದಾನ ನಮ್ಮೆಲ್ಲರ ಹಕ್ಕು ಎಂಬ ಸಂದೇಶವನ್ನು ಮುದ್ರಿಸಿದ ಪೌಷ್ಠಿಕಾಂಶವುಳ್ಳ ಪುಷ್ಠಿ ಆಹಾರ ಪ್ಯಾಕೇಟ್‍ಗಳನ್ನು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹಾಗೂ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ಅವರಿಂದ ಬಿಡುಗಡೆಗೊಳಿಸಲಾಯಿತು.6 ತಿಂಗಳಿಂದ 3 ವರ್ಷದ ಒಳಗಿನ ಮಕ್ಕಳಿಗೆ ವಿವಿಧ ಆಹಾರ ಧಾನ್ಯಗಳನ್ನು ಬಳಸಿ ತಯಾರಿಸಿದ ಪುಷ್ಠಿ ಎಂಬ ಪೌಷ್ಠಿಕ ಆಹಾರದ ಪ್ಯಾಕೇಟ್‍ಗಳ ಮೇಲೆ ಮತದಾರರಿಗೆ ಮತದಾನದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಫಲಾನುಭವಿಗಳ ಮನೆಗೆ ವಿತರಿಸಲಾಗುತ್ತಿದೆ.ಹೆಚ್ಚುವರಿ ಪೋಲೀಸ್ ವರಿಷ್ಠಾಧಿಕಾರಿ ರಾಮಗೊಂಡ ಬಸರಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಶ್ರೀಮತಿ ವಾಸಂತಿ ಉಪ್ಪಾರ್ ಹಾಗೂ ನಿರೂಪಣಾಧಿಕಾರಿಗಳಾದ ರಾಜ್ ಕುಮಾರ್ ರಾಥೋಡ್ ಉಪಸ್ಥಿತರಿದ್ದರು.