ಮಕ್ಕಳ ಪೋಷಣೆ ನಮ್ಮೆಲ್ಲರ ಹೊಣೆಯಾಗಿದೆ:ಅರಿಕೇರಿ

ಸೈದಾಪುರ:ನ.17:ಮಕ್ಕಳ ಪಾಲನೆ ಪೋಷಣೆ ಮತ್ತು ರಕ್ಷಣೆ ನಮ್ಮ ನಿಮ್ಮೆಲ್ಲರ ಹೊಣೆಯಾಗಿದೆ ಗ್ರಾಮ ಪಂಚಾಯತ ಅಧ್ಯಕ್ಷ ಮಾಳಪ್ಪ ಅರಿಕೇರಿ ಅಭಿಪ್ರಾಯಪಟ್ಟರು.

ಇಲ್ಲಿನ ಸರಕಾರಿ ಪ್ರೌಢ ಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಪೊಲೀಸ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಗ್ರಾಮ ಪಂಚಾಯತ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಮಕ್ಕಳ ಹಕ್ಕುಗಳ ಗ್ರಾಮಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಮಕ್ಕಳು ಬಾಲ್ಯದಲ್ಲಿ ತಮ್ಮ ಹಕ್ಕುಗಳ ಕುರಿತಾದ ಜ್ಞಾನದಿಂದ ವಂಚಿತರಾದರೆ ಭವಿಷ್ಯದಲ್ಲಿ ಅವರಿಗೆ ಲಭಿಸಬಹುದಾದ ಪ್ರಯೋಜನೆಗಳಿಂದ ವಂಚಿತರಾಗುತ್ತಾರೆ. ಆದ್ದರಿಂದ ಮನೆಯಲ್ಲಿರುವ ಹಿರಿಯರು ಮತ್ತು ಸಮಾಜದ ಪ್ರತಿಯೊಬ್ಬರು ತಮ್ಮ ಪಾಲಿನ ಹೊಣೆಗಾರಿಕೆಯನ್ನು ಅರಿತು ಕಾರ್ಯನಿರ್ವಹಿಸಬೇಕಾಗಿದೆ. ಆ ಮೂಲಕ ಮಕ್ಕಳ ವರ್ತಮಾನ ಮತ್ತು ಭವಿಷ್ಯವನ್ನು ರಕ್ಷಿಸುವ ಕೆಲಸ ಮಾಡಬೇಕಿದೆ ಎಂದರು.

ಬಾಲ ಕಾರ್ಮಿಕ ಯೋಜನೆ ನಿರ್ದೇಶಕ ರಿಯಾಜ ಪಟೇಲ ಮಾತನಾಡಿದರು. ಈ ಸಂದರ್ಭದಲ್ಲಿ ಮಕ್ಕಳ ರಕ್ಷಣೆ ಅಧಿಕಾರಿ ಗೊಂವಿಂದ ರಾಠೋಡ, ಎಸ್‍ಡಿಎಂಸಿ ಅಧ್ಯಕ್ಷ ತಿಮ್ಮಣ್ಣ ವಿಶ್ವಕರ್ಮ, ಮುಖ್ಯ ಗುರು ಈರಣ್ಣ ಯರಗಟ್ಟಿ, ಗ್ರಾಮ ಪಂಚಾಯಿತಿ ಉಪಾಧಕ್ಷೆ ನೇತ್ರಾವತಿ, ಸದಸ್ಯರಾದ ವಲಿಯೋದ್ದೀನ್, ಶಾಂತಪ್ಪ ರಾಂಪೂರ, ಶರಣಪ್ಪ ಬಾಲಚೇಡ, ಮಾಳಮ್ಮ, ಕಾರ್ಯದರ್ಶಿ ಕೃಷ್ಣಾ, ಸಿಆರ್‍ಪಿ ಮುಕುಂದರಾವ್ ಕುಲಕರ್ಣಿ ಸೇರಿದಂತೆ ಇತರರಿದ್ದರು.


ನಮ್ಮ ಶಾಲೆಯಲ್ಲಿ ಶೌಚಾಲಯ, ಶುದ್ಧ ಕುಡಿಯುವ ನೀರು, ಕಾಂಪೌಂಡ ವಾಲ ಒದಗಿಸಿಕೊಡಬೇಕು ಎಂದು 7ನೇ ತರಗತಿ ವಿದ್ಯಾರ್ಥಿನಿ ರಂಜಿತ ಕುಂದು ಕೊರತೆಗಳ ಬಗಗೆ ತಿಳಿಸಿದರು. ಇದಕ್ಕೆ ಗ್ರಾಮ ಪಂಚಾಯತ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳು ಸಮಸ್ಯೆ ಬಗೆಹರಿಸುತ್ತೇವೆ ಎಂದು ಹೇಳಿದರು.