ಮಕ್ಕಳ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಮುಖ್ಯ: ಯರಗುದ್ರಿ

ಇಂಡಿ: ಸೆ.3:ಮಕ್ಕಳು ತಮ್ಮಲ್ಲಿರುವ ಕಲೆ, ಸಾಹಿತ್ಯ, ಜಾನಪದ ಪ್ರಕಾರದ ಪ್ರತಿಭೆಯನ್ನು ತೋರಿ ಸಾಂಸ್ಕøತಿಕವಾಗಿ ಮುಂದೆ ಬರುವಲ್ಲಿ ಪ್ರತಿಭಾ ಕಾರಂಜಿಯು ಸೂಕ್ತ ವೇದಿಕೆಯಾಗಿದೆ ಎಂದು ಇಂಡಿ ತಾಲೂಕ ಅಕ್ಷರ ದಾಸೋಹ ಅಧಿಕಾರಿ
ಮಲ್ಲಿಕಾರ್ಜುನ ಯರಗುದ್ರಿ ಹೇಳಿದರು.
ಅವರು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಿರೇರೂಗಿ ಉರ್ದು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಇಂಡಿ ತಾಲೂಕಿನ ಉರ್ದು ಶಿಕ್ಷಣ ಸಂಯೋಜಕರಾದ ನವಾಜ್ ಖಾನ್ ಪಠಾಣ ಮಾತನಾಡಿ,ಪ್ರತಿಭಾ ಕಾರಂಜಿಯು ಕಲಾ ಪ್ರತಿಭೆಗಳ ಚಿಣ್ಣರ ಹಬ್ಬ, ಪೆÇೀಷಕರಿಗಲ್ಲದೆ ಸಾರ್ವಜನಿಕರು ಖುಷಿ ಪಡುವ ಹಬ್ಬ. ಮಕ್ಕಳ ಪ್ರತಿಭೆಯನ್ನು ತಂದೆ ತಾಯಿಗಳು ಹತ್ತಿರದಿಂದ ಕಣ್ಮುಂಬಿಕೊಳ್ಳುವ ವೇದಿಕೆಯಾಗಿದೆ ಎಂದು ಹೇಳಿದರು.
ಬಿ ಆರ್ ಪಿ ಅಧಿಕಾರಿಗಳಾದ ಆಯ್ ಜಿ ಅಳೂರ ಮಾತನಾಡಿ, ಪ್ರತಿಭಾ ಕಾರಂಜಿಯು ಗ್ರಾಮೀಣ ಸೊಗಡಿನ ಸಾಂಸ್ಕೃತಿಕ ವೈಭವವನ್ನು ಇನ್ನಷ್ಟು ಗಟ್ಟಿಗೊಳಿಸುವ ಪ್ರಯತ್ನ ಮಾಡುತ್ತಿದೆ.ಇದು ಶೈಕ್ಷಣಿಕ ಗುಣಮಟ್ಟದ ಫಲಿತಾಂಶಕ್ಕೂ ಸಹಕಾರಿಯಾಗಲಿದೆ ಎಂದು ಹೇಳಿದರು.
ಹಿರೇರೂಗಿ ಉರ್ದು ಕ್ಲಸ್ಟರ್ ಸಿ ಆರ್ ಪಿ ಬಿ ಡಿ ಚಪ್ಪರಬಂದ ಮಾತನಾಡಿ,ಪ್ರತಿಭಾ ಕಾರಂಜಿ ಸ್ಪರ್ಧೆಯನ್ನು 2002 ನೇ ಸಾಲಿನಿಂದ ಹಮ್ಮಿಕೊಳ್ಳಲಾಗುತ್ತಿದ್ದು,ಇದು ಶಿಕ್ಷಣ ಕ್ಷೇತ್ರದಲ್ಲಿ ಕಲೆಗಳನ್ನು ಉತ್ತೇಜಿಸಿ, ಶಾಲಾ ವಿದ್ಯಾರ್ಥಿಗಳ ಕಲಾತ್ಮಕ ಪ್ರತಿಭೆಯನ್ನು, ಸೃಜನಾತ್ಮಕ ಕೌಶಲ್ಯಗಳನ್ನು ಹೊರತರಲು ಉತ್ತಮ ವೇದಿಕೆಯಾಗಿದೆ ಎಂದು ಹೇಳಿದರು.
ಶಿಕ್ಷಕ ಸಂತೋಷ ಬಂಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿರೇರೂಗಿ ಗ್ರಾ.ಪಂ ಪಿ ಡಿ ಓ ಬಸವರಾಜ ಬಬಲಾದ, ಯುಬಿಎಸ್ ಮುಖ್ಯ ಶಿಕ್ಷಕ ಎ ಎಂ ಬೆದ್ರೇಕರ,
ತಾಂಬಾ ಯುಬಿಎಸ್ ಮುಖ್ಯ ಶಿಕ್ಷಕ ಬಶೀರ್ ಅಹ್ಮದ್ ಮುಲ್ಲಾ, ಬಂಥನಾಳ ಯುಬಿಎಸ್ ಮುಖ್ಯ ಶಿಕ್ಷಕ ಎ ಎ ವಾಲೀಕಾರ, ಕೆಬಿಎಸ್ ಮುಖ್ಯ ಶಿಕ್ಷಕ ಅನಿಲ ಪತಂಗಿ,
ಕೆಜಿಎಸ್ ಮುಖ್ಯ ಶಿಕ್ಷಕಿ ವ್ಹಿ ವೈ ಪತ್ತಾರ, ಶಿಕ್ಷಕರಾದ ಎಸ್ ಎಂ ಮಕಾನದಾರ, ಆಯ್ ಎ ಸಿಕಲಗಾರ,ಎಸ್ ಎಸ್ ಅರಬ,
ಎನ್ ಬಿ ಚೌಧರಿ,ಎಸ್ ಪಿ ಪೂಜಾರಿ ಹಾಗೂ ಕ್ಲಸ್ಟರ್ ವ್ಯಾಪ್ತಿಯ ಎಲ್ಲ ಶಾಲೆಗಳ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಜೊತೆಗೆ ಮಕ್ಕಳು ಭಾಗವಹಿಸಿದ್ದರು.