ಮಕ್ಕಳ ಭವಿಷ್ಯ ಉಜ್ವಲಗೊಳಿಸುವಲ್ಲಿ ಶಿಕ್ಷಕರ ಕೊಡುಗೆ ಅಪಾರ

ಹುಮನಾಬಾದ್ :ಸೆ.6:ಪ್ರತಿಯೊಂದು ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬೇಕಾದರೆ ಶೈಕ್ಷಣಿಕ ಕ್ಷೇತ್ರದ ಪ್ರಾಮುಖ್ಯತೆ ಬಹಳಷ್ಟು ಮಹತ್ವ ಪಡೆದುಕೊಂಡಿದೆ ಎಂದು ಶಾಸಕ ಡಾ. ಸಿದ್ದು ಪಾಟೀಲ್ ಹೇಳಿದರು.
ಪಟ್ಟಣದ ಬಸವರಾಜ ಪಾಟೀಲ್ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಶಧಿಕಾರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿಗಳ ವತಿಯಿಂದ ಮಂಗಳವಾರ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಾಗರಿಕ ಸಮಾಜದಲ್ಲಿ ವಿದ್ಯಾರ್ಥಿಗಳ ಬೆಳವಣಿಗೆಗೆ ಶಿಕ್ಷಕರು ನಿರಂತರ ಶ್ರಮ ವಹಿಸಬೇಕು. ಏಕೆಂದರೆ ಪ್ರಸ್ತುತ ದಿನಗಳಲ್ಲಿ ಶಿಕ್ಷಕರಿಗೆ ಗುರುವಿನ ಸ್ಥಾನ ನೀಡಲಾಗಿದೆ. ಇಂತಹ ಜವಾಬ್ದಾರಿ ಸ್ಥಾನದಲ್ಲಿರುವ ಶಿಕ್ಷಕರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜತೆಯಲ್ಲಿ ಮೌಲ್ಯ ಶಿಕ್ಷಣದ ಕುರಿತು ಜ್ಞಾನ ನೀಡಬೇಕು ಎಂದು ಸಲಹೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಡಾ. ಚಂದ್ರಶೇವಖರ ಪಾಟೀಲ್ ಮಾತನಾಡಿ, ಭವ್ಯ ಭಾರತ ನಿರ್ಮಾಣ ಮಾಡುವ ಶಕ್ತಿ ಶಿಕ್ಷಣ ಹಾಗೂ ಶಿಕ್ಷಕರ ಶ್ರಮದಿಂದಲೇ ಮಾತ್ರ ಸಾಧ್ಯ. ಶಾಲೆಗಳಲ್ಲಿ ಶಿಕ್ಷಕರು ಉತ್ತಮ ರೀತಿಯಲ್ಲಿ ಪಾಠ ಪ್ರವಚನ ಮಾಡಬೇಕು. ಜತೆಗೆ ವಿದ್ಯಾರ್ಥಿಗಳು ಕೂಡ ಶಿಕ್ಷಕರ ಸಲಹೆ ಸೂಚನೆಗಳನ್ನು ಚಾಚು ತಪ್ಪದೇ ಪಾಲಿಸಿ ನಿರಂತರ ಅಧ್ಯಾಯನ ಮಾಡಬೇಕು ಎಂದರು.
ಬೀದರ್ ರಾಮಕೃಷ್ಣ ವಿವೇಕಾನಂದ ಆಶ್ರಮದ ಸ್ವಾಮಿ ಜ್ಯೋತಿರ್ಮಯಾನಂದ ಸ್ವಾಮಿಜಿ ಸಾನಿಧ್ಯ ವಹಿಸಿದರು. ಶಿಕ್ಷಣ ಇಲಾಖೆ ಉಪನಿರ್ದೇಶಕ ಸಲೀಂ ಪಾಷಾ, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ಗುಡಾಳ್, ಸರಕಾರಿ ನೌಕರ ಸಂಘದ ತಾಲೂಕ ಅಧ್ಯಕ್ಷ ನಾಗಶಟ್ಟಿ ಡುಮಣಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ರವೀಂದ್ರರೆಡ್ಡಿ ಮಾಲಿಪಾಟೀಲ್, ಪ್ರೌಢ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶೇಖ್ ಮಹೇಬೂಬ್ ಪಟೇಲ್, ಪ್ರೌಢ ಶಾಲಾ ಶಿಕ್ಷಕರ ಸಂಘದ ತಾಲೂಕ ಅಧ್ಯಕ್ಷ

ಶರತ್ ಕುಮಾರ್ ನಾರಾಯಣಪೇಟ್ಕರ್, ಅಕ್ಷರ ದಾಸೋಹ ಯೋಜನಾಧಿಕಾರಿ ಸಂಜಯಕುಮಾರ ಕಾಂಗೆ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಪ್ರೀತಮಸಿಂಗ್ ಜಾಧವ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕ ಅಧ್ಯಕ್ಷ ಮುರಗೇಂದ್ರ ಸಜ್ಜನಶಟ್ಟಿ, ಸೂರ್ಯಕಾಂತ ಹಾವಶಟ್ಟಿ, ರಾಜಪ್ಪ ಸಿಂದೋಲ್, ಸಿದ್ದಲಿಂಗ ನಿರ್ಣಾ, ಮಹಾದೇವ ಮೇತ್ರೆ, ಡಾ. ಗೋವಿಂದ, ಸಂಗಮ್ಮ ಬಮ್ಮಣಿ , ಉಪಸ್ಥಿತರಿದ್ದರು.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವದಲ್ಲಿದ್ದಾಗ ಶಿಕ್ಷಕ ಪ್ರತಿಯೊಂದು ಸಮಸ್ಯೆ ಸ್ಪಂಧನೆ ಸಿಕ್ಕಿದೆ. ಪ್ರಸ್ತುತವಾಗಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ನುಡಿದಂತೆ ನಡೆಯುತ್ತಿದೆ. ಈ ಹಿಂದಿನ ಅವದಿಗೆ ಹುಮಾನಾದ್ ಕ್ಷೇತ್ರದಲ್ಲಿ ಶಾಸಕರಾಗಿದ್ದ ಮಾಜಿ ಸಚಿವ ರಾಜಶೇಖರ ಪಾಟೀಲ್ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಶಿಕ್ಷಕರ ಯಾವುದೇ ಸಮಸ್ಯೆಗಳಿದ್ದರೆ ತಿಳಿಸಿ ಕಾನೂನು ಚೌಕಟ್ಟಿನಲ್ಲಿ ಬಗೆಹರಿಸಲಾಗುವುದು.
ಡಾ. ಚಂದ್ರಶೇಖರ ಪಾಟೀಲ್
ವಿಧಾನ ಪರಿಷತ್ ಸದಸ್ಯ