
ಸಂಜೆವಾಣಿ ವಾರ್ತೆ
ನಂಜನಗೂಡು: ಸೆ.06:- ತಾಲೂಕು ಶಿಕ್ಷಣ ಇಲಾಖೆ ವತಿಯಿಂದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ಅಂಗವಾಗಿ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು.
ನಗರದ ಕಮಲಮ್ಮ ಗುರುಮಲ್ಲಪ್ಪ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ನಡೆಯಿತು ಉತ್ತಮ ಶಿಕ್ಷಕರ ಪ್ರಶಸ್ತಿ ಪುರಸ್ಕಾರ ಹಾಗೂ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಗೌರವ ಮಾಡಲಾಯಿತು
ಶಾಸಕ ದರ್ಶನ್ ಧ್ರುವ ಧ್ರುವನಾರಾಯಣ್ ಮಾತನಾಡಿ ದೇ ಶ ದಂತ್ಯ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ನಿಮಗೆಲ್ಲರಿಗೂ ಶಿಕ್ಷಕರ ದಿನಾಚರಣೆಯ ಶುಭಾಶಯಗಳು ಮುಂದುವರೆದು ಮಾತನಾಡಿ ಮಕ್ಕಳ ಭವಿಷ್ಯ ವೃದ್ಧಿಸುವಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯ ಸೊಸೈಟಿಯಲ್ಲಿ ಪ್ರತಿಯೊಬ್ಬ ಮಗುವಿಗೆ ಉತ್ತಮ ಭವಿಷ್ಯ ನಿರ್ಮಾಣಕ್ಕೆ ಮೂವರು ಕಾರಣ ತಂದೆ ತಾಯಿ ಹಾಗೂ ಶಿಕ್ಷಕರು ಎಂದರು.
ನಮ್ಮ ಜೀವನದಲ್ಲಿ ಜೀವನ ಪಾಠ ಹೇಳಿಕೊಟ್ಟವರು ಶಿಕ್ಷಕರು ಶಿಕ್ಷಣದ ಮೂಲಕ ಮಾನವೀಯ ಮೌಲ್ಯಗಳನ್ನು ತಿಳಿಸುತ್ತಾ ಮಗುವನ್ನು ಸಮಾಜದ ಜವಾಬ್ದಾರಿಯುತ ಪ್ರಜೆಯಾಗಿ ನಿರ್ಮಿಸುವರದಲ್ಲಿ ಶಿಕ್ಷಕರ ಪಾತ್ರ ಮಹತ್ವವಾದದ್ದು ಎಂದರು.
ತಾಲೂಕಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದ ಶಾಲೆಗಳಿಗೆ 25,000 ರೂ ಚೆಕ್ಕು ವಿತರಿಸಿ ಗೌರವಿಸಲಾಯಿತು ಅದೇ ರೀತಿ ಸರ್ಕಾರಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ 5,000 ರೂ ಚೆಕ್ ನೀಡಿ ಗೌರವಿಸಲಾಯಿತು
ಶಿಕ್ಷಣಾಧಿಕಾರಿ ಶಿವಲಿಂಗಯ್ಯ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮಕ್ಕೆ ಬಂದವರಿಗೆ ಎಲ್ಲಾ ಶಿಕ್ಷಕರಿಗೂ ಹೋಳಿಗೆ ಊಟ ಮಾಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಶಾಸಕರಾದ ದರ್ಶನ್ ಧ್ರುವ ನಾರಾಯಣ್ ತಹಸಿಲ್ದಾರ್ ಶಿವಕುಮಾರ್ ಶಿಕ್ಷಣಾಧಿಕಾರಿ ಶಿವಲಿಂಗಯ್ಯ ಶಿಕ್ಷಕರ ಸಂಘದ ಅಧ್ಯಕ್ಷ ಧರ್ಮ ರತ್ನಾಕರ್ ಖಾಸಗಿ ಶಾಲೆಯ ಅಧ್ಯಕ್ಷ ನಟರಾಜ್ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಮುದ್ದು ಮಾದೇಗೌಡರು ಶಿಕ್ಷಕರಾದ ರಂಗನಾಥ್ ರಾಜೇಂದ್ರ ಬಾಲರಾಜ್ ಕುಮಾರಸ್ವಾಮಿ ಸೋಮೇಶ್ ರಾವ್ ರೂಪ ಲೀಲಾ ಸುನಂದ ಮಲ್ಲೇಶ್ ಪುಟ್ಟರಾಜು ನಾಗರಾಜು ಹಾಗೂ ಇನ್ನಿತರರು ಇದ್ದರು.