ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳು ಕಂಡು ಬಂದಲ್ಲಿ ದೂರು ನೀಡಿ

ಜಗಳೂರು.ಮಾ.೬: ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ಮಾರ್ಗ ಸೂಚಿಗಳ ಅನ್ವಯ ಗ್ರಾಮಮಟ್ಟದ ಮಕ್ಕಳ ರಕ್ಷಣಾ ಸಮಿತಿಯ ಕಾರ್ಯವನ್ನು ಗ್ರಾಮ ಆರೋಗ್ಯ ಮತ್ತು ನೈರ್ಮಲ್ಯ ಸಮಿತಿ ಯೋಜನೆ ಮತ್ತು ಮಾನಿಟರಿಂಗ್ ಸಮಿತಿಗೆ ವಹಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿಯಮದ ಅನುಸಾರ ಸಮಗ್ರ ಯೋಜನೆ ಜಾರಿಗೆ ತಾಲೂಕು ಆಡಳಿತ ಬದ್ಧವಾಗಿದೆ ಎಂದು ತಹಶೀಲ್ದಾರ್ ಜಿ.ಸಂತೋಷ್‌ಕುಮಾರ್ ಹೇಳಿದರು.ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ  ಮಕ್ಕಳ ರಕ್ಷಣಾ ನಿರ್ದೇಶನಾಲಯ ಮಿಷನ್ ವಾತ್ಸಲ್ಯ ಅಡಿ ನಡೆದ ಕಾರ್ಯಕ್ರಮ ಮತ್ತು 2023 ರ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಕ್ಕಳ ಕಲ್ಯಾಣ, ಬಾಲ ನ್ಯಾಯಮಂಡಳಿ, ಮಕ್ಕಳ ಪಾಲನಾ ಸಂಸ್ಥೆಗಳ ನೋಂದಣಿ, ಬಾಲಕರ ಮತ್ತು ಬಾಲಕಿಯರ ಬಾಲಮಂದಿರ, ಅನುಪಾಲನಗೃಹಗಳು, ಪ್ರಧಾನ ಮಂತ್ರಿ ಮಕ್ಕಳ ಜಾಗೃತಿ ಯೋಜನೆ, ದತ್ತು ಕಾರ್ಯಕ್ರಮಗಳು ಹೀಗೆ ಅನೇಕ ಅಷನುಷ್ಠಾನಗೊಂಡ ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಅದಕ್ಕಾಗಿಯೇ ೧೦೯೮ ಉಚಿತ ಸಹಾಯವಾಣಿ ಕೇಂದ್ರವಿದ್ದು ದೌರ್ಜನ್ಯಕ್ಕೊಳಗಾದ ಮಕ್ಕಳು, ಪೋಷಕರು ಕರೆ ಮಾಡಿದರೆ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಜಾಗೃತಿ ವಹಿಸಲಿದ್ದಾರೆ ಎಂದರು.