ಮಕ್ಕಳ ಮೇಲೆ ನಡೆಯುತ್ತಿರುವ ಶೋಷಣೆ, ದೌರ್ಜನ್ಯಗಳನ್ನು ತಡೆಯುವ ಅಗತ್ಯವಿದೆ: ನ್ಯಾ.ಬಿ.ಎಸ್.ಭಾರತಿ

ಸಂಜೆವಾಣಿ ವಾರ್ತೆ
ಚಾಮರಾಜನಗರ.ಆ.18:- ಮಕ್ಕಳ ಮೇಲೆ ನಡೆಯುತ್ತಿರುವ ಶೋಷಣೆ, ದೌರ್ಜನ್ಯಗಳನ್ನು ತಡೆಯುವಅಗತ್ಯವಿದೆಎಂದು ಪ್ರಧಾನಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದಬಿ.ಎಸ್.ಭಾರತಿಅಭಿಪ್ರಾಯಪಟ್ಟರು.
ಅವರುನಗರದ ಹೊರವಲಯದಲ್ಲಿರುವಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ಕಾನೂನು ಅರಿವುಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಕ್ಕಳ ಮೇಲಿನ ದೌರ್ಜನ್ಯ ಹಾಗೂ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗುತ್ತಿವೆ. 18 ವರ್ಷದೊಳಗಿನ ಹೆಣ್ಣು ಮಕ್ಕಳನ್ನು ಮದುವೆ ಮಾಡಲಾಗುತ್ತಿದ್ದುಜಿಲ್ಲೆಯಲ್ಲಿ ಬಾಲ್ಯವಿವಾಹ ಪ್ರಕರಣಗಳು ಹೆಚ್ಚಾಗುತ್ತಿರುವುದು ವಿμÁಧನೀಯಎಂದರು.
ಪೆÇೀಕ್ಸೋ ಪ್ರಕರಣಗಳು ಹೆಚ್ಚಾಗುತ್ತಿದ್ದು ಈ ಸಂಬಂಧ ವಿದ್ಯಾರ್ಥಿಗಳಿಗೆ ಕಾನೂನು ಅರಿವುಅಗತ್ಯವಾಗಿದೆ. ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಶೋಷಣೆ, ದೌರ್ಜನ್ಯವನ್ನುತಡೆಯುವ ನಿಟ್ಟಿನಲ್ಲಿಎಲ್ಲರ ಸಹಕಾರಅಗತ್ಯವಾಗಿದೆ. ವಿದ್ಯಾರ್ಥಿಗಳು ಹೆಲ್ಮೆಟ್ ಧರಿಸದೇ ವಾಹನ ಚಾಲನೆ ಮಾಡಬಾರದು. ಇದೊಂದು ಕಾನೂನು ಉಲ್ಲಂಘನೆಯಾಗಿದ್ದು ಅಪಘಾತಗಳಾದ ಸಂದರ್ಭದಲ್ಲಿ ವಿಮೆ ಸಿಗುವುದಿಲ್ಲ ಎಂದು ತಿಳಿಸಿದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ಮಾತನಾಡಿ, ಮಹಿಳೆಯರಿಗೆ ವಿಶೇಷ ಹಕ್ಕು, ಬಾದ್ಯತೆಗಳನ್ನು ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಕಲ್ಪಿಸಿಕೊಟ್ಟಿದ್ದಾರೆ. ಬಸವಣ್ಣ ಹಾಗೂ ಅಂಬೇಡ್ಕರ್ ಅವರನ್ನು ಮಹಿಳೆಯರು ನೆನಪಿಸಿಕೊಳ್ಳಬೇಕು. ಕೇಂದ್ರ ಸರ್ಕಾರ 2005ರಲ್ಲಿ ಕೌಟುಂಬಿಕ ದೌರ್ಜನ್ಯ ಕಾಯ್ದೆ, 1961ರಲ್ಲಿ ವರದಕ್ಷಿಣೆ ನಿμÉೀಧ ಕಾಯ್ದೆಯನ್ನು ಜಾರಿಗೆ ತಂದಿವೆ. ಅಲ್ಲದೇ ಜೀವನಾಂಶವನ್ನು ಕಾನೂನು ವ್ಯಾಪ್ತಿಗೆ ತರಲಾಗಿದೆ ಎಂದರು.
ವರದಕ್ಷಿಣೆ ಸಂಬಂಧ ಅರಿವು ಇರುವುದರಿಂದ ಇತ್ತೀಚಿನ ದಿನಗಳಲ್ಲಿ ವರದಕ್ಷಿಣೆ ಪ್ರಕರಣಗಳು ಕಡಿಮೆಯಾಗುತ್ತಿವೆ. ಆದರೆ, ವಿವಾಹ ವಿಚ್ಛೇದನ ಪ್ರಕರಣಗಳು ಹೆಚ್ಚಾಗುತ್ತಿರುವುದು ದುರಂತ. ಗಂಡು, ಹೆಣ್ಣು ನಡುವೆ ಸಾಮರಸ್ಯ ಕೊರತೆಯಿಂದಾಗಿ ವಿವಾಹ ವಿಚ್ಛೇದನ ಪ್ರಕರಣ ಹೆಚ್ಚಾಗಿದೆ. ಮಹಿಳೆಯರ ಮೇಲೆ ದೈಹಿಕ, ಮಾನಸಿಕ ಹಿಂಸೆ ಕೊಟ್ಟವರಿಗೆ 498ಎ ಕಾಯ್ದೆ ಪ್ರಕಾರ 3 ವರ್ಷ ಶಿಕ್ಷೆ, ದಂಡ ವಿಧಿಸಲಾಗುತ್ತದೆ. ಅಲ್ಲದೇ ಜೀವನಾಂಶವನ್ನು ಹೆಂಡತಿ ತನ್ನ ಗಂಡನಿಂದ ಹಾಗೂ ತಂದೆ, ತಾಯಿ ತನ್ನ ಮಕ್ಕಳಿಂದ ಪಡೆಯಲು ಅವಕಾಶವಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿವಿ ಕುಲಪತಿ ಪೆÇ್ರ.ಎಂ.ಆರ್.ಗಂಗಾಧರ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಶ್ರೀಧರ್, ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಮಂಜು ಹರವೆ, ಪ್ರಧಾನ ಕಾರ್ಯದರ್ಶಿ ವಿರೂಪಾಕ್ಷಸ್ವಾಮಿ ಸೇರಿದಂತೆ ಇತರರಿದ್ದರು