ಮಕ್ಕಳ ರಕ್ಷಣೆಗೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಿ:ಶಶಿಧರ್ ಕೋಸಂಬೆ

ವಿಜಯಪುರ, ಫೆ.9: ಬಾಲ್ಯವಿವಾಹ, ಬಾಲ ಕಾರ್ಮಿಕ ಪದ್ದತಿ, ಕಿಶೋರ್ ಕಾರ್ಮಿಕ ಪದ್ಧತಿ ಸಂಪೂರ್ಣ ನಿμÉೀಧಿಸಿ, ಫೆÇೀಕ್ಸೋ ಪ್ರಕರಣ ದಾಖಲಿಸುವುದು ಹಾಗೂ ಶಾಲೆಯಿಂದ ಹೊರಗೂಳಿದ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರುವ ಮೂಲಕ ಮಕ್ಕಳ ರಕ್ಷಣೆ ಮಾಡಲು ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯÀ ಶಶಿಧರ ಕೋಸಂಬೆ ಹೇಳಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೆÇಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ-2015 ಪೋಕ್ಸೋ ಕಾಯ್ದೆ-2012 ಬಾಲ್ಯವಿವಾಹ ನಿμÉೀಧ ಕಾಯ್ದೆ-2006, ಆರ್.ಟಿ.ಇ ಕಾಯ್ದೆ-2009ರ ಕುರಿತು ಭಾಗೀದಾರ ಇಲಾಖೆಗಳ ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮ ಮಟ್ಟದ ಅಧಿಕಾರಿಗಳಿಗೆ ಹಮ್ಮಿಕೊಂಡ ಎರಡು ದಿನಗಳ ಕಾರ್ಯಾಗಾರಕ್ಕೆ ಫೆ.8 ರಂದು ಚಾಲನೆ ನೀಡಿ, ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಬಾಲ್ಯ ವಿವಾಹ ತಡೆಗಟ್ಟಲು ಎಲ್ಲಾ ಇಲಾಖೆಗಳು ಜನರಲ್ಲಿ ಜಾಗೃತಿ ಮೂಡಿಸಬೇಕು. ಫೆÇೀಕ್ಸೋ ಪ್ರಕರಣಗಳನ್ನು ದಾಖಲಿಸಿಕೊಂಡು ಕ್ರಮ ವಹಿಸಬೇಕು. ಶಿಶು ಮರಣ ಘಟಿಸದಂತೆ ನೋಡಿಕೊಳ್ಳಲು ಮುಂಜಾಗೃತ ಕ್ರಮ ವಹಿಸಬೇಕು. ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ, ಸಮಾಜದ ಅನಿಷ್ಟ ಪದ್ಧತಿಗಳನ್ನು ತಡೆಯಬೇಕೆಂದು ಎಂದು ಅವರು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ ಎಸ್. ಕುಂದರ್ ಅವರು ಮಾತನಾಡಿ, ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳ ತಡಗಟ್ಟಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಅಧಿಕಾರಿಗಳು ಪರಿಣಾಮಕಾರಿಯಾಗಿ ಜಾಗೃತಿ ಕಾರ್ಯಕ್ರಮ ಅನುಷ್ಠಾನಗೊಳಿಸಿ ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರು ಮಾತನಾಡಿ, ಅಧಿಕಾರಿಗಳು ಕಾರ್ಯಾಗಾರದ ಸದುಪಯೋಗ ಪಡೆದು ಉತ್ತಮ ರೀತಿಯಲ್ಲಿ ಮಕ್ಕಳ ರಕ್ಷಣೆಯಲ್ಲಿ ಭಾಗಿಯಾಗಿ ಅವರ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಅವರು ನುಡಿದರು.
ಯುನಿಸೆಫ್ ಪ್ರಾದೇಶಿಕ ಸಂಯೋಜಕರಾದ ಡಾ.ಕೆ. ರಾಘವೇಂದ್ರ ಭಟ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಹೆಚ್ಚುವರಿ ಪೆÇಲೀಸ್ ಅಧೀಕ್ಷಕ ರಾಮಣ್ಣ ಗೌಡ ಹಟ್ಟಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಸಿ.ಬಿ ದೇವರಮನಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಶ್ರೀಧರ್ ಕುಲಕರ್ಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ ಕೆ ಚವ್ಹಾಣ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾಕ್ಷಿ ಜಾನಕಿ ಸ್ವಾಗತಿಸಿದರು, ಗುರುರಾಜ್ ನಿರೂಪಿಸಿದರು, ಮೌನೇಶ್ ಪೆÇೀತದಾರ ವಂದಿಸಿದರು.