ಬೆಳಗಾವಿ, ಜು.20: ಪೆÇೀಕ್ಸೋ ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ದೋಷಾರೋಪಣೆ ಪಟ್ಟಿ ಸಲ್ಲಿಸಬೇಕಾಗುತ್ತದೆ. ಇಂತಹ ಪ್ರಕರಣಗಳಲ್ಲಿ ಯಾವುದೇ ರೀತಿಯ ವಿಳಂಬವಾಗದಂತೆ ಕ್ರಮ ವಹಿಸಬೇಕು. ಇದಲ್ಲದೇ ಜಿಲ್ಲೆಯಲ್ಲಿ ಭಿಕ್ಷುಕ, ನಿರ್ಗತಿಕ, ಅನಾಥ ಮಕ್ಕಳ ರಕ್ಷಣೆ ಮತ್ತು ಪುನರ್ವಸತಿಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ಮಕ್ಕಳ ಕಲ್ಯಾಣ ಮತ್ತು ರಕ್ಷಣಾ ಸಮಿತಿ ಸಭೆ ಹಾಗೂ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪೆÇೀಕ್ಸೋ ಅಥವಾ ಬಾಲ್ಯವಿವಾಹಕ್ಕೆ ಸಂಬಂಧಿಸಿದಂತೆ ನಿಗದಿತ ಅವಧಿಯಲ್ಲಿ ಪ್ರಕರಣ ದಾಖಲಿಸಲು ವಿಳಂಬವಾದರೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ವತಿಯಿಂದ ಸಮನ್ಸ್ ನೀಡಿ ಸೂಕ್ತ ಸಮಜಾಯಿಷಿ ಪಡೆದುಕೊಳ್ಳಬೇಕು ಎಂದರು.
ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳನ್ನು ಗುರುತಿಸಿ ಅವರಿಗೆ ನಿಯಮಾನುಸಾರ ಪುನರ್ವಸತಿ ಕಲ್ಪಿಸಿದಾಗಲೂ ಪದೇ ಪದೇ ಅದೇ ಕೆಲಸದಲ್ಲಿ ತೊಡಗಿದರೆ ಅಂತಹವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಒಟ್ಟು 39 ಮಕ್ಕಳ ಪಾಲನಾ ಸಂಸ್ಥೆಗಳಿದ್ದು, ಅವುಗಳ ಸಾಮರ್ಥ್ಯಕ್ಕೆ ಅನುಗುಣವಾಗಿ ಅಗತ್ಯವಿರುವ ಮಕ್ಕಳಿಗೆ ಸೌಲಭ್ಯಗಳನ್ನು ಒದಗಿಸಬೇಕಿದೆ.
ಅನಾಥ ಮಕ್ಕಳು, ಏಕ ಪಾಲಕರನ್ನು ಹೊಂದಿರುವ ಮಕ್ಕಳಿಗೆ ಈ ಸಂಸ್ಥೆಗಳಲ್ಲಿ ಸೇರಿಸಿ ಸರಕಾರದಿಂದ ಉತ್ತಮ ಸೌಲಭ್ಯಗಳನ್ನು ಒದಗಿಸಬಹುದು. ಆದ್ದರಿಂದ ಇಂತಹ ಮಕ್ಕಳ ಪಾಲನಾ ಸಂಸ್ಥೆಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ ತಾತ್ಕಾಲಿಕವಾಗಿ ಸೌಲಭ್ಯ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಉದ್ಯೋಗಸ್ಥ ಮಹಿಳೆಯರ ವಸತಿಗಾಗಿ ಮೂರು ವಸತಿನಿಲಯ ಮಂಜೂರಾಗಿದ್ದು, ಅವುಗಳನ್ನು ಕೂಡಲೇ ಆರಂಭಿಸುವಂತೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಭಿಕ್ಷುಕ, ಅನಾಥ ಮಕ್ಕಳ ರಕ್ಷಣೆಗೆ ಸೂಚನೆ:
ಸಂಕಷ್ಟದಲ್ಲಿರುವ 6 ರಿಂದ 18 ವರ್ಷದೊಳಗಿನ ಮಕ್ಕಳನ್ನು ರಕ್ಷಿಸಿ ಅವರಿಗೆ ತೆರೆದ ತಂಗುದಾಣದಲ್ಲಿ ವ್ಯವಸ್ಥೆ ಕಲ್ಪಿಸಬೇಕು. ಭಿಕ್ಷಾಟನೆ, ಚಿಂದಿ ಆಯುವವರು, ತ್ಯಜಿಸಲ್ಪಟ್ಟಿರುವ, ಬೀದಿಯಲ್ಲಿ ಸುತ್ತುವ ಅನಾಥ ಮಕ್ಕಳು ಹೀಗೆ ಆಶ್ರಯ ಅಗತ್ಯವಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಸರಕಾರದ ಸೌಲಭ್ಯ ಒದಗಿಸಿ ಸೂಕ್ತ ಶಿಕ್ಷಣ ಮತ್ತು ವಸತಿ ಸೌಲಭ್ಯಗಳನ್ನು ಒದಗಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಅಭಿಯಾನ ಮಾದರಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಬಾಲ್ಯವಿವಾಹ ತಡೆಗಟ್ಟಲು ಅನುಕೂಲವಾಗುವಂತೆ ಮಕ್ಕಳ ರಕ್ಷಣಾಧಿಕಾರಿಗಳನ್ನಾಗಿ ಸರಕಾರವು ಅನೇಕ ಅಧಿಕಾರಿಗಳನ್ನು ನೇಮಿಸಲಾಗಿದೆ. ಆದರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಮಾತ್ರ ಇದಕ್ಕೆ ಸೀಮಿತಗೊಳಿಸದೇ ಇತರೆ ಅಧಿಕಾರಿಗಳು ಕೂಡ ತಮ್ಮ ಜವಾಬ್ದಾರಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮುರುಳಿಮೋಹನ ರೆಡ್ಡಿ, ಬೆಳಗಾವಿ ನಗರ ಉಪ ಪೆÇಲೀಸ್ ಆಯುಕ್ತರಾದ ಸ್ನೇಹಾ, ಹೆಚ್ಚುವರಿ ಪೆÇಲೀಸ್ ವರಿಷ್ಠಾಧಿಕಾರಿ ವೇಣುಗೋಪಾಲ್, ಐ.ಎ.ಎಸ್. ಪೆÇ್ರಬೇಷನರಿ ಅಧಿಕಾರಿ ಶುಭಂ ಶುಕ್ಲಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಆರ್.ನಾಗರಾಜ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.