ಮಕ್ಕಳ ಲೈಂಗಿಕ ದೌರ್ಜನ್ಯ ಮತ್ತು ಶೋಷಣೆ ತಡೆ ದಿನ ಪೋಕ್ಸೊ ಕಾಯ್ದೆಯ ಕುರಿತು ಜಾಗೃತಿ ಜಾಥಾ

ಕಲಬುರಗಿ:ನ. 18: ಮಕ್ಕಳ ರಕ್ಷಣಾ ನಿರ್ದೇಶನಾಲಯ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ, ಪೋಲಿಸ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ರಕ್ಷಣಾ ಘಟಕ, ಮಕ್ಕಳ ಪಾಲನಾ ಸಂಸ್ಥೆಗಳು, ಮಕ್ಕಳ ಸಹಾಯವಾಣಿ-1098 ಹಾಗೂ ಮಕ್ಕಳ ಹಕ್ಕುಗಳ ಜಾಗೃತಿ ಅಭಿಯಾನ (ಕ್ರೀಮ್ ಯೋಜನೆ) ಕಲಬುರಗಿ ಅವರುಗಳ ಸಂಯುಕ್ತಾಶ್ರಯದಲ್ಲಿ ನಗರದ ನ್ಯೂ ಜೇವರ್ಗಿ ಕ್ರಾಸ್ ರಾಷ್ಟ್ರಪತಿ ಮಕ್ಕಳ ಲೈಂಗಿಕ ದೌರ್ಜನ್ಯ ಮತ್ತು ಶೋಷಣೆ ತಡೆ ದಿನ ಪೋಕ್ಷೊ ಕಾಯ್ದೆಯ ಕುರಿತು ಜಾಗೃತಿ ಮತ್ತು ಜಾಥಾ ಕಾರ್ಯಕ್ರಮಕ್ಕೆ ಚಾಲನೆ ಮಹಿಳಾ ಠಾಣೆಯ ಅರಕ್ಷಕ ನಿರೀಕ್ಷ ರಾಜೆ ಸಾಹೇಬ ಅವರು ಚಾಲನೆ ನೀಡಿದರು. ನಿರೂಪಣಾಧಿಕಾರಿ ಮುರುಗೇಶ ಗುಣಾರಿ,ಸಿ.ಡಿ.ಪಿ.ಓ. ನಗರ ಶ್ರೀ ಭೀಮರಾಯ ಕಣ್ಣೂರು, ಕಾನೂನು ಮತ್ತು ಪರಿವೀಕ್ಷಣಾಧಿಕಾರಿ, ಭಾರತೀಶ್ ಶೀಲವಂತ, ಎನ್.ಸಿ.ಪಿ.ಎಲ್. ಯೋಜನಾ ನಿರ್ದೇಶಕರಾದ ಸಂತೋಷ ಕುಲಕರ್ಣಿ ಸೇರಿದಂತೆ ಅಂಗನವಾಡಿ ಕಾರ್ಯಕರ್ತರು ಆಶಾಕಾರ್ಯಕರ್ತರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಬ್ಬಂಧಿ ವರ್ಗದವರು ಉಪಸ್ಥಿತರಿದ್ದರು.