ಮಕ್ಕಳ ವಿಜ್ಞಾನ ಮೇಳ


ಬಾದಾಮಿ,ಮಾ.3:ಶಾಲಾ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸುವಲ್ಲಿ ಮಕ್ಕಳ ವಿಜ್ಞಾನ ಮೇಳಗಳು ಸಹಾಯಕವಾಗುತ್ತವೆ ಎಂದು ಇಲಕಲ್ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡೈಟ್)ಯ ಉಪನ್ಯಾಸಕ ಅಶೋಕ ಕೊಡಗಲಿ ಹೇಳಿದರು.
ಅವರು ನಗರದ ಸರ್ಕಾರಿ ಶಾಸಕರ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಅಜಿಂ ಪ್ರೇಮಜಿ ಫೌಂಡೇಶನ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಬಾದಾಮಿ ಕ್ಲಸ್ಟರ್ ಮಟ್ಟದ ಮಕ್ಕಳ ವಿಜ್ಞಾನ ಮೇಳ'' ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕ್ಷೇತ್ರ ಸಮನ್ವಯಾಧಿಕಾರಿ ಎಂ.ಬಿ.ದೊಡ್ಡಪ್ಪನ್ನವರ ಮಾತನಾಡಿ ಮಕ್ಕಳಲ್ಲಿ ಮೂಲ ವಿಜ್ಞಾನದ ಬಗ್ಗೆ ಪರಿಕಲ್ಪನೆ ಬೆಳೆಸುವಲ್ಲಿ ಇಂತಹ ಮೇಳಗಳು ಸಹಾಯಕವಾಗುತ್ತವೆ ಎಂದು ಹೇಳಿದರು. ನಗರದ ಎಸ್.ಬಿ.ಎಂ.ಪದವಿ ಕಾಲೇಜಿನ ಉಪನ್ಯಾಸಕ ಶಶಿಧರ್ ಮೂಲಿಮನಿ ಮಕ್ಕಳನ್ನು ಉದ್ದೇಶಿಸಿ ರಾಮನ್ ಎಫೆಕ್ಟ್ ಬಗ್ಗೆ ವಿವರಿಸಿದರು ಹಾಗೂ ವಿಜ್ಞಾನ ವಿ?Àಯದ ಕುರಿತು ಸಂವಾದ ನಡೆಸಿದರು. ಎಸ್.ಡಿ.ಎಂ.ಸಿ.ಅಧ್ಯಕ್ಷ ರಂಗಪ್ಪ ಕಳಸದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯ ಮೇಲೆ ಕ್ಷೇತ್ರ ಸ್ಥಳೀಯ ಸರಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಬಿ.ಎಸ್.ಅಬ್ಬಿಗೇರಿ, ಶಿಕ್ಷಣ ಸಂಯೋಜಕ ವಿ.ಎಸ್.ಹಿರೇಮಠ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಎಸ್.ಎಸ್.ಯಲಿಗಾರ, ಸಮೂಹ ಸಂಪನ್ಮೂಲ ವ್ಯಕ್ತಿ ಶಿವಪ್ರಕಾಶ ಇಟಗಿ, ಅಜಿಂ ಪ್ರೇಮಜಿ ಫೌಂಡೇಶನ್‍ನ ಅರುಣ, ಎಸ್.ಡಿ.ಎಂ.ಸಿ.ಸದಸ್ಯ ಅಂಬಿಗೇರ ಹಾಜರಿದ್ದರು. ಕಾರ್ಯಕ್ರಮದಲ್ಲಿ ಕ್ಲಸ್ಟರ್ ನಲ್ಲಿ ಬರುವ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳ ಮಕ್ಕಳು ವಿಜ್ಞಾನದ ಮಾದರಿಗಳನ್ನು ಪ್ರದರ್ಶನ ಮಾಡಿದರು. ಮಧ್ಯಾಹ್ನ ವಿಜ್ಞಾನ ಶಿಕ್ಷಕ ರಾಜಶೇಖರ್ ಮುತ್ತಿನಮಠ ಇವರಿಂದಪವಾಡ ರಹಸ್ಯ ಬಯಲು” ಕಾರ್ಯಕ್ರಮ ಜರುಗಿತು. ಇಲಾಖೆಯ ಸುತ್ತೋಲೆಯಂತೆ ವಿಜ್ಞಾನದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ನಂತರ ಪವಾಡ ರಹಸ್ಯ ಬಯಲು ಕಾರ್ಯಕ್ರಮ ಪ್ರದರ್ಶನ ಮಾಡಿದ ಮುಖ್ಯಶಿಕ್ಷಕ ರಾಜಶೇಖರ ಮುತ್ತಿನಮಠ ಇವರನ್ನು ಶಾಲೆಯ ಪರವಾಗಿ ಸನ್ಮಾನಿಸಿ, ಗೌರವಿಸಲಾಯಿತು. ಸ್ಥಳೀಯ ಶಾಲೆಯ ಮುಖ್ಯಶಿಕ್ಷಕ ಬಸವರಾಜ ಕರಡಿ ಸ್ವಾಗತಿಸಿ, ಪ್ರಾಸ್ಥಾವಿಕವಾಗಿ ಮಾತನಾಡಿದರು. ಸಹಶಿಕ್ಷಕಿ ಗೀತಾ ಬಿಜ್ಜಳ ಕಾರ್ಯಕ್ರಮವನ್ನು ನಿರೂಪಿಸಿದರು. ಗೌರಮ್ಮ ತೋಟಗೇರ ವಂದಿಸಿದರು.