ಮಕ್ಕಳ ಸರ್ವತೋಮುಖ ಪ್ರಗತಿಗೆ ಪ್ರತಿಭಾ ಕಾರಂಜಿ ಪೂರಕ

ಪಾವಗಡ, ಸೆ. ೧೭- ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸಾಂಸ್ಕೃತಿಕ ಮತ್ತು ಕ್ರೀಡಾಕೂಟಗಳಲ್ಲಿ ಭಾಗವಹಿಸಿದಾಗ ಸರ್ವತೋಮುಖ ಅಭಿವೃದ್ದಿಗೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಶ್ವಥನಾರಾಯಣ ತಿಳಿಸಿದರು.
ಪಟ್ಟಣದ ವೆಂಕಟೇಶ್ವರ ಶಿಕ್ಷಣ ಸಂಸ್ಥೆ ಆವರಣದಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ತಂತ್ರಜ್ಞಾನದ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮ ದೈನಂದಿನ ಶಿಕ್ಷಣದೊಂದಿಗೆ ಗ್ರಾಮೀಣ ಭಾಗದ ಕಲೆ, ಸಂಸ್ಕೃತಿ, ಕ್ರೀಡೆ ಸೇರಿದಂತೆ ಆಚಾರ ವಿಚಾರಗಳನ್ನು ಮೈಗೂಡಿಸಿಕೊಂಡಾಗ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಅನುಕೂಲವಾಗಿ ತಮ್ಮ ಗುರಿ ತಲುಪಲು ಸಾಧ್ಯವಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಸಮಯ ಸದುಪಯೋಗ ಮಾಡಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು ಮಾತನಾಡಿ, ವಿದ್ಯಾರ್ಥಿಗಳಿಗೆ ಹಲವಾರು ಮಾರ್ಗದರ್ಶನಗಳನ್ನು ನೀಡಿದರು.
ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾಗಿದ್ದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಪುರಸಭಾಧ್ಯಕ್ಷ ವೇಲುರಾಜು, ಇ.ಸಿ.ಒ. ಶಿವಮೂರ್ತಿ ನಾಯ್ಕ್, ಸಿ.ಆರ್.ಪಿ .ಶ್ರೀನಿವಾಸ್, ಮೂರ್ತಿ, ನೋಡಲ್ ಅಧಿಕಾರಿ ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.