ಮಕ್ಕಳ ಸರ್ವಾಂಗೀಣ ಪ್ರಗತಿಗೆ ಪ್ರತಿಭಾ ಕಾರಂಜಿಯೂ ಸಹಕಾರಿ

ತಿಪಟೂರು, ಸೆ. ೧೬- ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಪಠ್ಯದ ಜತೆಗೆ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದು ಶಾಸಕ ಕೆ. ಷಡಕ್ಷರಿ ಹೇಳಿದರು
ಇಲ್ಲಿನ ಗಾಂಧಿನಗರದಲ್ಲಿರುವ ಭೋವಿ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು
ಸರ್ಕಾರ ಮತ್ತು ಸಮುದಾಯ ಜತೆಗೂಡಿ ಸರ್ಕಾರಿ ಶಾಲೆಗಳ ಸುಧಾರಣೆಗಾಗಿ ಶ್ರಮಿಸಬೇಕು ಎಂದು ಕಿವಿ ಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಸನಗರಭಾ ಸದಸ್ಯ ಮೊಹಮದ್ ಗೌಸ್, ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಚಂದ್ರಯ್ಯ, ಮುಖ್ಯ ಶಿಕ್ಷಕ ಎಂ.ಎಂ. ಮಂಜಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಯರಾಂ, ಸಹಕಾರ್ಯದರ್ಶಿ ಸಿ.ಎಸ್. ನಾಗರಾಜು ಮತ್ತಿತರರು ಉಪಸ್ಥಿತರಿದ್ದರು.