ಮಕ್ಕಳ ಸುರಕ್ಷತೆ ಕ್ರಮ

ಕೆ.ಆರ್.ಪುರ,ಜು.೨೨-ಕೆ.ಆರ್.ಪುರದಲ್ಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಪರಿಶೀಲನೆ ನಡೆಸಿದರು.
ಪರಿಶೀಲನೆ ನಡೆಸಿ ಮಾತನಾಡಿದ ಅವರು ಮೊದಲದಿನದ ಪರೀಕ್ಷೆಯಲ್ಲಿ ರಾಜ್ಯಾದ್ಯಂತ 99.6 % ವಿದ್ಯಾರ್ಥಿಗಳು ಪರಿಕ್ಷೆ ಬರೆದಿದ್ದು ವ್ಯವಸ್ಥಿತವಾಗಿ ನಿರ್ವಹಿಸಲಾಗಿದೆ ಎಂದು ನುಡಿದರು.
ಮಕ್ಕಳ ಸುರಕ್ಷಿತ ದೃಷ್ಟಿಯಿಂದ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸರ್ಮಪಕವಾಗಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.
ಶಾಲೆಗಳು ಪುನರಾರಂಭಕ್ಕೆ ಶಿಕ್ಷಣ ಆಯುಕ್ತರ ನೇತೃತ್ವದಲ್ಲಿ ಕಾರ್ಯಪಡೆ ರಚನೆ ಮಾಡಲಾಗಿದ್ದು ಮಕ್ಕಳ ಸುರಕ್ಷತೆಗೆ ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳಲಾಗುವುದೆಂದು ವಿವರಿಸಿದರು.
ಸೋಮವಾರ ಆಯುಕ್ತರು ವರದಿ ನೀಡಲಿದ್ದು ತದನಂತರ ಶಾಲೆಗಳನ್ನು ಆರಂಭಿಸುವ ಕುರಿತು ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಕೆ.ಆರ್.ಪುರದ ಐಟಿಐ, ಕರ್ನಾಟಕ ಪಬ್ಲಿಕ್ ಶಾಲೆ, ಅವಲಹಳ್ಳಿ, ಕಾಡುಗೋಡಿ ಭಾಗದ 10 ಶಾಲೆಗಳಿಗೆ ಭೇಟಿ ನೀಡಿದರು.