ಮಕ್ಕಳ ಸ್ನೇಹಿ ಗ್ರಾಮೀಣ ಗ್ರಂಥಾಲಯ ತರಬೇತಿ ಕಾರ್ಯಕ್ರಮ


ಸಿರುಗುಪ್ಪ : ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಸರ್ಕಾರಿ ಶಾಲೆಗಳಿಗೆ ಡಿಜಿಟಲ್ ಗ್ರಂಥಾಲಯ ಕುರಿತು ಮಾಹಿತಿ ನೀಡಿ, ಮಕ್ಕಳ ಸ್ನೇಹಿ ಗ್ರಂಥಾಲಯವನ್ನು ನಿರ್ಮಿಸುವಂತೆ ಮನರೇಗಾ ಸಹಾಯಕ ನಿರ್ದೇಶಕಿ ರಾಜೇಶ್ವರಿ ತಿಳಿಸಿದರು.
ನಗರದ ಸಾಮರ್ಥ್ಯ ಸೌಧದಲ್ಲಿ ಸೋಮವಾರ ನಡೆದ ಮೈಸೂರಿನ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ವತಿಯಿಂದ ಗ್ರಾಮ ಪಂಚಾಯಿತ ಗ್ರಂಥಾಲಯ ಮೇಲ್ವಿಚಾರಕರಿಗೆ “ಮಕ್ಕಳ ಸ್ನೇಹಿ ಗ್ರಾಮೀಣ ಗ್ರಂಥಾಲಯ” ಕುರಿತು ಮೂರು ದಿನಗಳ ಕಾಲ ಮುಖಾ-ಮುಖಿ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ತಾ.ಪಂ.ಸಹಾಯಕ ಲೆಕ್ಕಾಧಿಕಾರಿ ಸರಸ್ವತಿ, ತರಬೇತಿ ವಿಷಯ ನಿರ್ವಾಹಕ ಬಿ.ವೀರಯ್ಯ, ಸಂಸ್ಥೆಯ ವಿಕೇಂದ್ರಿಕೃತ ತರಬೇತಿ ಸಂಯೋಜಕ ಕುರುವಳ್ಳಿ ತಿಮ್ಮಯ್ಯ, ಸಂಪನ್ಮೂಲ ವ್ಯಕ್ತಿ ಜಗದೇವಪ್ಪ ಈರಣ್ಣ ಡಬರಾಬಾದ್ ಇದ್ದರು.