ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ

ಕೊಟ್ಟೂರು ನ 08 : ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಇದೇ 14 ರಿಂದ 2021 ರ ಜನವರಿ 24 ರವರೆಗೆ ತಾಲೂಕಿನ ಎಲ್ಲ ಗ್ರಾಮ ಪಂಚಾಯ್ತಿಗಳಲ್ಲಿ ‘ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ’ ಮತ್ತು ‘ಮಕ್ಕಳ ಹಕ್ಕುಗಳ ಗ್ರಾಮಸಭೆ’ ನಡೆಸಲಾಗುವುದು ಎಂದು ತಾಲೂಕುಪಂಚಾಯಿತಿ ಇಒವಿಶ್ವನಾಥ ಹೇಳಿದರು.
ಪಟ್ಟಣದ ತಾಲೂಕು ಪಂಚಾಯಿತಿ ಕಾರ್ಯಲಯದಲ್ಲಿ ಸಿಬ್ಬಂದಿ ತರಬೇತಿಯಲ್ಲಿ ಮಾತನಾಡಿದರು.
ಮಕ್ಕಳ ಸ್ನೇಹಿ ಗ್ರಾಮಪಂಚಾಯಿತಿ ಅಭಿಯಾನದಡಿ, ಮಕ್ಕಳ ಜನನ ನೋಂದಣಿ, ಜನನ ಪ್ರಮಾಣ ಪತ್ರ ವಿತರಣೆ, ಪೌಷ್ಟಿಕ ಆಹಾರ ಕುರಿತು ಮಾರ್ಗದರ್ಶನ ಹಾಗೂ ಜಾಗೃತಿ, ಚುಚ್ಚುಮದ್ದು, ಮಕ್ಕಳ ಕ್ರೀಡಾಕೂಟ, ಮಕ್ಕಳ ಸಾಂಸ್ಕೃತಿಕ ಚಟುವಟಿಕೆಗಳು, ಮಕ್ಕಳಿಗೆ ಕಥೆ ಹೇಳುವ ಕಾರ್ಯಕ್ರಮ, ಸ್ಥಳೀಯ ಸಾಂಪ್ರದಾಯಿಕ ಆಟೋಟ ಚಟುವಟಿಕೆಗಳು, ಶೈಕ್ಷಣಿಕ ಮತ್ತು ವೃತ್ತಿಪರ ಮಾರ್ಗದರ್ಶನದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು. ತಾಲೂಕು ಪಂಚಾಯಿತಿ ಯೋಜನಾಧಿಕಾರಿ ಬೆಣ್ಣೆ ವಿಜಯ ಕುಮಾರ, ಎಡಿ ಕೆಂಚಪ್ಪಸೇರಿದಂತೆ ಇತರರು ಇದ್ದರು.