ಮಕ್ಕಳ ಸ್ಪರ್ಧಾ ಗುಣಕ್ಕೆ ಮುಕ್ತ ಅವಕಾಶ ಅಗತ್ಯ – ಡಿಡಿಪಿಐ

ಪ್ರಿನಸ್ಸ್ ಫಾತೀಮಾ ಶಾಲೆ : ಉರ್ದು ಶಾಲಾ ಮಕ್ಕಳ ಪ್ರತಿಭಾ ಕಾರಂಜಿ ಕಾರ್ಯಕ್ರಮ
ರಾಯಚೂರು.ಸೆ.೧೬- ಮಕ್ಕಳಲ್ಲಿರುವ ಸ್ಪರ್ಧಾ ಗುಣಕ್ಕೆ ಮುಕ್ತ ಅವಕಾಶ ನೀಡುವ ಮೂಲಕ ಅವರು ಸಮಾಜದಲ್ಲಿ ಸ್ಪರ್ಧಾತ್ಮಕವಾಗಿ ಬೆಳೆಯಲು ನೆರವಾಗುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ವೃಷಬೇಂದ್ರಯ್ಯ ಅವರು ಹೇಳಿದರು.
ಅವರಿಂದು ಪ್ರಿನ್ಸಸ್ ಫಾತೀಮಾ ಶಾಲೆ ಮತ್ತು ಉರ್ದು ಕ್ಲಸ್ಟರ್ ೧ ಮತ್ತು ೨ ರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪಾರಾದರ್ಶಕತೆ ಮೂಲಕ ಮಕ್ಕಳ ಪ್ರತಿಭೆಯನ್ನು ತುಲಾನಾತ್ಮಕವಾಗಿ ಮೌಲ್ಯಮಾಪನ ಮಾಡಬೇಕು. ಉರ್ದು ಮಾತೃಭಾಷೆಯಾಗಿದೆ. ಈ ಭಾಷೆ ಕಲಿಯುವ ಮೂಲಕ ಮಕ್ಕಳು ಹೆಚ್ಚಿನ ರೀತಿಯಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು. ಪ್ರತಿಭಾ ಕಾರಂಜಿ ಕಾರ್ಯಕ್ರಮ ಅತ್ಯುತ್ತಮ ಕಾರ್ಯಕ್ರಮವಾಗಿದೆ. ಇಂತಹ ಕಾರ್ಯಕ್ರಮ ನಡೆಸುವ ಮೂಲಕ ಹೆಚ್ಚಿನ ಪ್ರೋತ್ಸಾಹ ನೀಡುವ ಅಗತ್ಯವಿದೆಂದರು.
ಮುಖ್ಯಾತಿಥಿಗಳಾಗಿ ಆಗಮಿಸಿದ ರಜಾಕ್ ಉಸ್ತಾದ್ ಅವರು ಮಾತನಾಡುತ್ತಾ, ಯಾವುದೇ ತಾರತಮ್ಯವಿಲ್ಲದೆ, ಮಕ್ಕಳಿಗೆ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಬೇಕು. ಸೋಲು – ಗೆಲುವು ಮುಖ್ಯವಲ್ಲ. ಮಕ್ಕಳು ಸ್ಪರ್ಧೆಗಳ ಮೂಲಕ ಸ್ಪರ್ಧಾತ್ಮಕ ಭಾವನೆ ಬೆಳೆಸಿಕೊಳ್ಳಲು ಅವಕಾಶ ನೀಡಬೇಕು. ಮಕ್ಕಳ ಮನಸ್ಸು ಮೃದುತ್ವದಿಂದ ಕೂಡಿರುತ್ತದೆ. ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಮಾನಸೀಕವಾಗಿ ಸದೃಢಗೊಳ್ಳುವಂತೆ ಪ್ರೋತ್ಸಾಹ ನೀಡುವ ಅಗತ್ಯವಿದೆಂದರು. ನ್ಯೂ ಎಜ್ಯುಕೇಷನ್ ಸೊಸೈಟಿಯ ಉಪಾಧ್ಯಕ್ಷ ಮಹ್ಮದ್ ಅಬ್ದುಲ್ ಹೈಫಿರೋಜ್ ಅವರು ಮಾತನಾಡುತ್ತಾ, ಪ್ರತಿಭಾ ಕಾರಂಜಿ ಕಾರ್ಯಕ್ರಮ ಮೂಲಕ ಸಂಸ್ಥೆಯೂ ಮಕ್ಕಳಲ್ಲಿ ತಮ್ಮ ಪ್ರತಿಭೆ ಗುರುತಿಸುವಂತಹ ಕೆಲಸ ಸಂಸ್ಥೆ ನಿರ್ವಹಿಸುತ್ತದೆ. ಈ ಕಾರ್ಯಕ್ರಮವನ್ನು ಉತ್ತಮವಾಗಿ ನಿರ್ವಹಿಸುವ ಮೂಲಕ ವಿದ್ಯಾರ್ಥಿಗಳಿಗೆ ಎಲ್ಲಾ ಹಂತಗಳ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವಂತೆ ಮಾಡಲಾಗುತ್ತದೆಂದರು.
ಸಂಸ್ಥೆಯ ಅಧ್ಯಕ್ಷರಾದ ಎಂ.ಎಂ.ಪಟೇಲ್ ಅವರು ಮಾತನಾಡುತ್ತಾ, ಮಕ್ಕಳಲ್ಲಿರುವ ಪ್ರತಿಭೆಯನ್ನು ಇಂತಹ ಕಾರ್ಯಕ್ರಮ ಆಯೋಜನೆಯಿಂದ ಗುರುತಿಸಲು ಸಾಧ್ಯವೆಂದು ಹೇಳಿದ ಅವರು, ಮಕ್ಕಳು ಇಂತಹ ಕಾರ್ಯಕ್ರಮಗಳಲ್ಲಿ ಹೆಚ್ಚಿನ ರೀತಿಯಲ್ಲಿ ಪಾಲ್ಗೊಳ್ಳುವ ಮೂಲಕ ದೈಹಿಕ ಮತ್ತು ಮಾನಸಿಕ ಆರೋಗ್ಯದೊಂದಿಗೆ ಶೈಕ್ಷಣಿಕವಾಗಿ ಹೆಚ್ಚಿನ ಮಾಹಿತಿ ಪಡೆಯಲು ಸಾಧ್ಯವಾಗುತ್ತದೆ.