ಮಕ್ಕಳ ಹಕ್ಕುಗಳ ರಕ್ಷಣೆಗೆ ಬದ್ಧರಾಗಲು ಸಲಹೆ

ಹುಣಸಗಿ,ನ.22-ಸಮೀಪದ ಗೆದ್ದಲಮರಿಯ ಸರಕಾರಿ ಪ್ರೌಢ ಶಾಲೆಯಲ್ಲಿ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಮಕ್ಕಳ ಹಕ್ಕುಗಳ ವಿಶೇಷ ಗ್ರಾಮ ಸಭೆ ನಡೆಯಿತು.
ಕಾನೂನು ಮತ್ತು ಪರೀಕ್ಷಾಧಿಕಾರಿ ರಾಜೇಂದ್ರ ಕುಮಾರ ಯಾದವ್ ಸಭೆಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಬಾಲ್ಯದಲ್ಲಿ ಮಕ್ಕಳು ತಮ್ಮ ಹಕ್ಕುಗಳ ಕುರಿತಾದ ಜ್ಞಾನದಿಂದ ವಂಚಿತರಾದರೆ, ಭವಿಷ್ಯದಲ್ಲಿ ಅವರಿಗೆ ಲಭಿಸಬಹುದಾದ ಪ್ರಯೋಜನಗಳಿಂದ ವಂಚಿತರಾಗಬೇಕಾಗುತ್ತದೆ. ಹಾಗಾಗಿ, ಮನೆಯಲ್ಲಿರುವ ಹಿರಿಯರು ಮತ್ತು ಸಮಾಜದ ಪ್ರತಿಯೊಬ್ಬರೂ ಈ ನಿಟ್ಟಿನಲ್ಲಿ ತಮ್ಮ ಪಾಲಿನ ಹೊಣೆಗಾರಿಕೆ ಅರಿತು ಕಾರ್ಯನಿರ್ವಹಿಸಬೇಕಿದೆ. ಆ ಮೂಲಕ ಮಕ್ಕಳ ವರ್ತಮಾನ ಮತ್ತು ಭವಿಷ್ಯ ರಕ್ಷಿಸುವ ಕೆಲಸ ಮಾಡಬೇಕಿದೆ ಎಂದರು.
ಶಾಲೆಯ ಮುಖ್ಯಗುರು ವಿ.ಎಮ್. ಬೆಳ್ಳೂಬ್ಬಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಅತಿ ಚಿಕ್ಕ ವಯಸ್ಸಿನಲ್ಲಿಯೇ ಹೆಣ್ಣು ಮಕ್ಕಳಿಗೆ ಮದುವೆ ಮಾಡಲಾಗುತ್ತದೆ. ಆ ಮೂಲಕ ಅವರ ಭವಿಷ್ಯ ಹಾಳು ಮಾಡಲಾಗುತ್ತಿದೆ. ಪೆÇೀಷಕರು ತೆಗೆದುಕೊಳ್ಳುವ ಇಂತಹ ತಪ್ಪು ನಿರ್ಧಾರಗಳಿಂದಾಗಿ ಮಕ್ಕಳು ತಮ್ಮ ಪಾಲಿನ ಹಕ್ಕುಗಳಿಂದ ವಂಚಿತರಾಗುತ್ತಿದ್ದಾರೆ ಎಂದು ವಿಷಾದಿಸಿದರು.
ಗ್ರಾಪಂ ಅಧ್ಯಕ್ಷ ಶಿವರೆಡ್ಡಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮ ಪಂಚಾಯತ ಅಭಿರುದ್ದಿ ಅಧಿಕಾರಿ ಮೋಹನ್ ಅವರು ಮಕ್ಕಳ ಹಕ್ಕುಗಳ ರಕ್ಷಣೆಯ ಮಹತ್ವ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಸದ್ಯಸರಾದ ಬಸಯ್ಯ ದೇವಪೂರ್, ಬಸವಂತರಾಯ ದೇಶಪಾಂಡೆ,ವಿವಿಧ ಶಾಲೆಗಳಿಂದ ಶಿಕ್ಷಕರು, ಮಕ್ಕಳು, ಪೆÇೀಷಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ಸಭೆಯಲ್ಲಿ ಮಕ್ಕಳಿಗೂ ಕೂಡ ವೇದಿಕೆ ಮೇಲೆ ಸ್ಥಾನ ಕಲ್ಪಿಸಲಾಗಿತ್ತು.