ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ


ಗದಗ,ಜು.18: ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಈ ಕುರಿತು ಅರಿವು ಮೂಡಿಸುವುದು ಮಕ್ಕಳ ರಕ್ಷಣಾ ಘಟಕ ಸೇರಿದಂತೆ ಎಲ್ಲ ಇಲಾಖೆಯ ಕರ್ತವ್ಯವಾಗಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ರಾಮತ್ನಾಳ ತಿಳಿಸಿದರು.
ಜಿಲ್ಲಾಡಳಿತ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ವಿವಿಧ ಇಲಾಖೆಗಳೊಂದಿಗೆ ಮಕ್ಕಳ ರಕ್ಷಣಾ ವ್ಯವಸ್ಥೆ ಕುರಿತು ಭಾಗೀದಾರರೊಂದಿಗೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಂಗನವಾಡಿ ಕೇಂದ್ರ, ಶಾಲಾ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ 1098 ಶಾಶ್ವತ ಫಲಕ ಬರೆಯಿಸಲು ತಿಳಿಸಿದರು. ಶಾಲೆಗಳಲ್ಲಿ ಪ್ರತಿ ತಿಂಗಳು ಮಕ್ಕಳ ಸಭೆಗಳನ್ನು ಜರುಗಿಸುವದರ ಜೊತೆಗೆ ಗ್ರಾಮ ಪಂಚಾಯತ್ ಗಳಲ್ಲಿಯೂ ಸಹ ಮಕ್ಕಳ ಸಹಾಯವಾಣಿ 1098 ಶಾಶ್ವತ ಫಲಕ ಅಳವಡಿಸಬೇಕು. ಬಾಲ್ಯ ವಿವಾಹ ನಡೆಯುತ್ತಿರುವ ಕುರಿತು ಮಾಹಿತಿ ಬಂದರೆ ತಕ್ಷಣವೇ ವಿಳಂಬಕ್ಕೆ ಆಸ್ಪದ ನೀಡದೆ ಸ್ಥಳಕ್ಕೆ ಧಾವಿಸಿ ಅಗತ್ಯ ದಾಖಲಾತಿಗಳೊಂದಿಗೆ ಎಫ್. ಐ.ಆರ್ ದಾಖಲಿಸಲು ಕ್ರಮ ವಹಿಸಬೇಕು.
ಶಾಲೆಯಲ್ಲಿ ಕಡ್ಡಾಯವಾಗಿ ಶೌಚಾಲಯಗಳು ಇರುವ ಹಾಗೆ ಹಾಗೂ ಅವುಗಳ ಸ್ವಚ್ಛತೆಗೆ ಕ್ರಮ ವಹಿಸಿ ಮಕ್ಕಳ ವಸತಿ ಶಾಲೆಗಳಲ್ಲಿ ಮಕ್ಕಳ ಸಮಸ್ಯೆಗಳನ್ನು ಆಲಿಸಲು ಮಕ್ಕಳ ಸಲಹಾ ಪೆಟ್ಟಿಗೆಗಳನ್ನು ತಪ್ಪದೇ ಅಳವಡಿಸಬೇಕು. ಶಾಲೆಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡದೆ ಕಾನೂನು ಬಾಹಿರ ಚಟುವಟಿಕೆಗಳ ತಡೆಗಾಗಿ ಬೀಟ್ ಪೆÇಲೀಸರು ಶಾಲೆಗಳಿಗೆ ಭೇಟಿ ನೀಡಬೇಕು ಎಂದು ಸಲಹೆ ಮಾಡಿದರು.
ಮಕ್ಕಳ ಹಕ್ಕುಗಳ ಆಯೋಗದ ಸದಸ್ಯರಾದ ಕೆ.ಟಿ. ತಿಪ್ಪೇಸ್ವಾಮಿ ಅವರು ಮಾತನಾಡಿ ಶಾಲೆಗಳಲ್ಲಿ ಮಕ್ಕಳ ನಿಯಮಿತ ಆರೋಗ್ಯ ತಪಾಸಣೆಯಾಗಬೇಕು. ವಸತಿ ಶಾಲೆಯಲ್ಲಿ ಮಕ್ಕಳ ಆರೋಗ್ಯದ ಕುರಿತು ನಿರ್ಲಕ್ಷ್ಯ ತೋರಬಾರದು ಹಾಗೂ ಶಾಲೆಗಳಲ್ಲಿ ಮಕ್ಕಳಿಗೆ ಮೂಲಭೂತ ಸೌಕರ್ಯಗಳು ಒದಗುವಂತೆ ನೋಡಿಕೊಳ್ಳಬೇಕು. ಶಾಲೆಯ ಕಂಪೌಂಡಿನೊಳಗೆ ಸುರಕ್ಷಿತ ವಿದ್ಯುತ್ ಸಂಪರ್ಕ ಇರುವಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ಅಪಘಾತ ಸಂಭವಿಸುವ ಸಾಧ್ಯತೆ ಇದ್ದು ಸಂಬಂಧಿತ ಮುಖ್ಯಸ್ಥರನ್ನೇ ಹೊಣೆಗಾರರಾಗಲಿದ್ದಾರೆ. ಪ್ರತಿ ಗ್ರಾಮ ಪಂಚಾಯತ್‍ಗಳಲ್ಲಿ ಮಕ್ಕಳ ಗ್ರಾಮ ಸಭೆ ನಡೆಸಬೇಕು. ಮಕ್ಕಳಿಗೆ ಏನಾದರೂ ಸಮಸ್ಯೆಯಾದಲ್ಲಿ ಸ್ವತ: ಮಕ್ಕಳೇ ಆಗಮಿಸಿ ಪೆÇಲೀಸ್ ಸ್ಟೇಶನ್ ದೂರು ಕೊಡುವ ಕುರಿತು ಅವರಿಗೆ ಅರಿವು ಮೂಡಿಸಬೇಕು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ. ಗುರುಪ್ರಸಾದ ಅವರು ಮಾತನಾಡಿ ಶಾಲೆ ಮತ್ತು ಕಾಲೇಜುಗಳಲ್ಲಿ ಮಕ್ಕಳ ಹಕ್ಕುಗಳ ಕುರಿತು ಹಾಗೂ ಫೆÇೀಕ್ಸೋ ಕಾಯ್ದೆ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಮಾತನಾಡಿ
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧಿಕಾರಿ ಚಳಗೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಿ.ವೈ. ಶೆಟ್ಟೆಪ್ಪನವರ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರವಿ ಗುಂಜೀಕರ್ , ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವಲಿಂಗಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ಜಗದೀಶ ನುಚ್ಚಿನ, ಬಾಲ ನ್ಯಾಯ ಮಂಡಳಿ ಸದಸ್ಯರಾದ ಜೆ.ಸಿ.ರೇಶ್ಮಿ, ಭಾರತಿ ಶಲವಡಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಅನ್ನಪೂರ್ಣ ಗಾಣಿಗೇರ ಎಲ್ಲ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.