ಮಕ್ಕಳ ಹಕ್ಕುಗಳ ರಕ್ಷಣ ಆಯೋಗದ ಸದಸ್ಯರಿಂದ ಸಮಾಲೋಚನಾ ಸಭೆ

ಚಿತ್ರದುರ್ಗ.ಜೂ.೨; ಚಿತ್ರದುರ್ಗ ನಗರದ ಬಾಲಭವನ ಸಭಾಂಗಣದಲ್ಲಿ ಬುಧವಾರ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ಕೆ. ತಿಪ್ಪೇಸ್ವಾಮಿ ಸಮಾಲೋಚನಾ ಸಭೆ ನಡೆಸಿದರು.
 ಜಿಲ್ಲೆಯಲ್ಲಿನ ಬಾಲ್ಯವಿವಾಹ ಪ್ರಕರಣ, ಪೋಕ್ಸೋ ಪ್ರಕರಣ, ಬಾಲಕಾರ್ಮಿಕ, ಶಾಲೆ ಬಿಟ್ಟ ಮಕ್ಕಳು ಹಾಗೂ ಇತರೆ ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಸಮಾಲೋಚನಾ ಸಭೆಯಲ್ಲಿ ಚರ್ಚಿಸಲಾಯಿತು.
  ಮಕ್ಕಳ ಪಾಲನಾ ಸಂಸ್ಥೆಗಳಾದ ಚಿತ್ರದುರ್ಗ ನಗರದ ಸರ್ಕಾರಿ ಬಾಲಕರ ಬಾಲಮಂದಿರ ಹಾಗೂ ಸರ್ಕಾರಿ ಬಾಲಕಿಯರ ಬಾಲಮಂದಿರ ಸಂಸ್ಥೆಗಳಿಗೆ ಭೇಟಿ ನೀಡಿ ಮಕ್ಕಳೊಂದಿಗೆ ಸಮಾಲೋಚಿಸಿ ಪರಿಶೀಲನೆ ನಡೆಸಿದರು. ನಂತರ ಹಿರಿಯೂರು ತಾಲ್ಲೂಕಿನ ಹೂವಿನಹೊಳೆ ಗ್ರಾಮದ ಅಂಗನವಾಡಿ ಕೇಂದ್ರ ಹಾಗೂ ಶಾಲೆಗೆ ಭೇಟಿ ನೀಡಿ ಶಿಕ್ಷಕರೊಂದಿಗೆ ಸಭೆ ನಡೆಸಿದರು. ಬಳಿಕ ಈಶ್ವರಗೆರೆ ಗ್ರಾಮ ಪಂಚಾಯತ್‍ಗೆ ಭೇಟಿ ನೀಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಯೊಂದಿಗೆ ಸಭೆಯನ್ನು ನಡೆಸಿದರು.
 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್. ಬಣಕಾರ್, ಜಿಲ್ಲಾ ನಿರೂಪಣಾಧಿಕಾರಿ  ಕೆಂಪಹನುಮಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಪವಿತ್ರ,  ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಡಾ ಪ್ರಭಾಕರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ. ಸವಿತ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ವರ್ಗದವರು ಹಾಜರಿದ್ದರು.