ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಸೆರೆ


ಬೆಳ್ತಂಗಡಿ, ಜೂ.೯- ಕಕ್ಕಿಂಜೆಯಲ್ಲಿ ನಾಲ್ಕು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಧರ್ಮಸ್ಥಳ ಪೋಲೀಸರು ಬಂಧಿಸಿದ್ದು, ಪೊಕ್ಸೊ ಪ್ರಕರಣ ದಾಖಲಿಸಲಾಗಿದೆ.
ಕಕ್ಕಿಂಜೆಯ ಕತ್ತರಿಗುಡ್ಡೆ ನಿವಾಸಿ ವಿಘ್ನೇಶ್ ಭಂಡಾರಿ ಬಂಧಿತ ಆರೋಪಿ. ಈತ ಇಲ್ಲಿಗೆ ಸಮೀಪದ ನಾಲ್ಕು ವರ್ಷ ಪ್ರಾಯದ ಬಾಲಕಿಯನ್ನು ಮನೆಗೆ ಕರೆದೊಯ್ದು ಬೆತ್ತಲೆ ಚಿತ್ರಗಳನ್ನು ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಅರೋಪಿಸಿ ಬಾಲಕಿಯ ತಂದೆ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕೂಡಲೇ ಆರೋಪಿಯನ್ನು ಬಂಧಿಸಿದ್ದಾರೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಬಂಧಿತ ಆರೋಪಿಯ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.