ಮಜ್ದೂರ್ ಸಂಘದ ನೂತನ ಶಾಖೆ ಉದ್ಘಾಟನೆ

ಕೋಲಾರ, ಆ.೬: ಭಾರತೀಯ ಮಜ್ದೂರ್ ಸಂಘದ ಮುಳಬಾಗಿಲು ತಾಲೂಕು ನೂತನ ಶಾಖೆಯು ಓಂ ಶಕ್ತಿ ಚಲಪತಿರವರ ಅಧ್ಯಕ್ಷತೆಯಲ್ಲಿ ಭಾರತೀಯ ಮಜ್ದೂರ್ ಸಂಘದ ಜಿಲ್ಲಾ ಅಧ್ಯಕ್ಷ ಕೆ.ವಿ.ಶಿವಕುಮಾರ್ ಉಪಸ್ಥಿತಿಯಲ್ಲಿ ಉದ್ಘಾಟನೆಗೊಂಡಿತ್ತು.
ಭಾರತೀಯ ಮಜ್ದೂರ್ ಸಂಘದ ಜಿಲ್ಲಾ ಅಧ್ಯಕ್ಷ ಕೆ.ವಿ.ಶಿವಕುಮಾರ್ ಮಾತನಾಡಿ, ಸಂಘವು ಈಗಾಗಲೇ ಜಿಲ್ಲಾದ್ಯಂತ ಎಲ್ಲಾ ತಾಲೂಕುಗಳಲ್ಲಿ ತಾಲೂಕು ಶಾಖೆಗಳನ್ನು ಪ್ರಾರಂಭಿಸಿ ಸಂಘವನ್ನು ಮತ್ತಷ್ಟು ಬಲಿಷ್ಟಗೊಳಿಸುವುದರ ಜೊತೆಗೆ ಅಸಂಘಟಿತ ಕಾರ್ಮಿಕರನ್ನು ಒಟ್ಟುಗೂಡಿಸುವಂತಹ ಕೆಲಸವನ್ನು ಮಾಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಭಾರತೀಯ ಮಜ್ದೂರ್ ಸಂಘದ ಜಿಲ್ಲಾ ಕಾರ್ಯದರ್ಶಿ ಸೋಮಶೇಖರ್, ಜಿಲ್ಲಾ ಉಪಾಧ್ಯಕ್ಷ ಚಲಪತಿ ಗೋಕುಲ್, ಶ್ರೀನಿವಾಸಪುರ ತಾಲೂಕು ಅಧ್ಯಕ್ಷ ನಾಗಭೂಷಣ್, ಮುಳಬಾಗಿಲು ತಾಲೂಕು ಅಧ್ಯಕ್ಷ ನಿಖಿಲ್, ಕಾರ್ಯದರ್ಶಿ ಕಿಶೋರ್ ಕುಮಾರ್, ಹೊಸದಿಗಂತ ಚಂದ್ರು, ರಾಧಮ್ಮ ಆಂಜಿನಪ್ಪ ಉಪಸ್ಥಿತರಿದ್ದರು.