ಮಟಕಾ-ಜೂಜಾಟ:14 ಜನರ ಬಂಧನ

ಕಲಬುರಗಿ,ನ.16-ಇಲ್ಲಿನ ಶಿವಾಜಿ ನಗರದ ಮಜೀದ್ ಹತ್ತಿರ ಜೂಜಾಟವಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇಲೆ ನಗರ ಅಪರಾಧ ಪತ್ತೆದಳ (ಸಿಸಿಬಿ)ದ ಅಧಿಕಾರಿಗಳು ದಾಳಿ ನಡೆಸಿ 8 ಜನರನ್ನು ಬಂಧಿಸಿ 11,370 ರೂ.ನಗದು ಮತ್ತು ಮಟಕಾ ಚೀಟಿ ಜಪ್ತಿ ಮಾಡಿದ್ದಾರೆ.
ಜೂಜುಕೋರರ ವಿರುದ್ಧ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ನಗರದ ನೆಹರು ಗಂಜ್ ನಲ್ಲಿ ಮಟಕಾ ನಂಬರ್ ಬರೆದುಕೊಳ್ಳುತ್ತಿದ್ದ ರೇವೂರ (ಬಿ) ಗ್ರಾಮದ ಕಾಡಸಿದ್ಧ ಬಶೆಟ್ಟಿ ಎಂಬಾತನನ್ನು ಚೌಕ್ ಪೊಲೀಸರು ಬಂಧಿಸಿ 825 ರೂ.ನಗದು ಜಪ್ತಿ ಮಾಡಿದ್ದಾರೆ. ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರೋಜಾ ಪೊಲೀಸ್ ಠಾಣೆ ಸಿಬ್ಬಂದಿ ಮಿಜಗುರಿ ಬಡಾವಣೆಯಲ್ಲಿ ದಾಳಿ ನಡೆಸಿ ಮಟಕಾ ನಂಬರ್ ಬರೆದುಕೊಳ್ಳುತ್ತಿದ್ದ ಅಕ್ಬರ್ ಎಂಬಾತನನ್ನು ಬಂಧಿಸಿ 3000 ರೂ.ನಗದು ಜಪ್ತಿ ಮಾಡಿದ್ದಾರೆ. ಆರೋಪಿ ವಿರುದ್ಧ ರೋಜಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ಜಿಡಿಎ ಲೇಔಟ್ ನಲ್ಲಿ ಸ್ಟೇಷನ್ ಬಜಾರ್ ಪೊಲೀಸ್ ಸಿಬ್ಬಂದಿ ದಾಳಿ ನಡೆಸಿ ನಾಲ್ವರು ಜೂಜುಕೋರರನ್ನು ಬಂಧಿಸಿ 4040 ರೂ.ನಗದು ಜಪ್ತಿ ಮಾಡಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.