ಮಟಕಿ: ಸಾಂಸ್ಕøತಿಕ ಭವನ ನಿರ್ಮಾಣಕ್ಕೆ ಶಾಸಕ ಸುಭಾಷ್ ಗುತ್ತೇದಾರ ಚಾಲನೆ

ಕಲಬುರಗಿ:ಜು.24:ಆಳಂದ ತಾಲೂಕಿಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೊಸ ಆಯಾಮ ದೊರಕಿದೆ ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಹೇಳಿದರು.

ಶನಿವಾರ ಆಳಂದ ತಾಲೂಕಿನ ಮಟಕಿ ಗ್ರಾಮದಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದ ರೂ. 20 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಈಡಿಗ ಸಮುದಾಯದ ಯಲ್ಲಮ್ಮ ದೇವಿ ಸಾಂಸ್ಕøತಿಕ ಭವನದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಮತಕ್ಷೇತ್ರದ ಎಲ್ಲ ವರ್ಗದ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆಯಾ ಸಮುದಾಯದ ಧಾರ್ಮಿಕ ಸ್ಥಳಗಳನ್ನು ಪುನಶ್ಚೇತನಗೊಳಿಸಲು ಅನುದಾನ ನೀಡಿದ್ದೇನೆ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ಸರ್ಕಾರ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಅಲ್ಲದೇ ತಾಲೂಕಿನ ಮೂಲೆ ಮೂಲೆಯಲ್ಲಿ ಅಭಿವೃದ್ಧಿ ಕಾರ್ಯಗಳು ಭರದಿಂದ ಸಾಗಿವೆ ಎಂದು ನುಡಿದರು.

ಈ ಸಂದರ್ಭದಲ್ಲಿ ಮಾಜಿ ತಾಪ ಮಾಜಿ ಸದಸ್ಯರಾದ ಶರಣಬಸಪ್ಪ ಬಿರಾದಾರ ನಿರಗುಡಿ ಗ್ರಾ.ಪ. ಅಧ್ಯಕ್ಷ ಯಶವಂತರಾವ ಪಾಟೀಲ, ಮುಖಂಡರಾದ ಅಶೋಕ ಗುತ್ತೇದಾರ, ಪ್ರಭಾಕರ ನಾಗೂರೆ, ಪರಮೇಶ್ವರ, ಸಿದ್ದಲಿಂಗ ಗುತ್ತೇದಾರ, ಪಂಚಾಯತ ರಾಜ್ ಇಂಜಿನಿಯರಿಂಗ್ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ನಾಗಮೂರ್ತಿ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.